ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಂಡೊನೇಷ್ಯಾಕ್ಕೆ ವಿಶ್ವಸಂಸ್ಥೆಯ ಸ್ಥಾನಿಕ ಸಮನ್ವಯಕರಾಗಿ ಗೀತಾ ಸಭರವಾಲ್ ನೇಮಕ

Published 23 ಏಪ್ರಿಲ್ 2024, 15:28 IST
Last Updated 23 ಏಪ್ರಿಲ್ 2024, 15:28 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಇಂಡೊನೇಷ್ಯಾಕ್ಕೆ ವಿಶ್ವಸಂಸ್ಥೆಯ ಸ್ಥಾನಿಕ ಸಮನ್ವಯಕಾರರನ್ನಾಗಿ ಭಾರತದ ಗೀತಾ ಸಭರವಾಲ್ ಅವರನ್ನು ನೇಮಕ ಮಾಡಲಾಗಿದೆ.

ಸಭರವಾಲ್‌ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ತಿಳಿಸಿದ್ದಾರೆ.

‘ಹವಾಮಾನ ಬದಲಾವಣೆ, ಸುಸ್ಥಿರ ಶಾಂತಿ, ಆಡಳಿತ ಮತ್ತು ಸಾಮಾಜಿಕ ನೀತಿ ಬೆಂಬಲಿಸುವ ಅಭಿವೃದ್ಧಿಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಗೀತಾ, ಸುಸ್ಥಿರ ಅಭಿವೃದ್ಧಿ ಗುರಿಯನ್ನು (ಎಸ್‌ಡಿಜಿ) ವೇಗಗೊಳಿಸಲು ಡಿಜಿಟಲ್ ತಂತ್ರಜ್ಞಾನ ಮತ್ತು ದತ್ತಾಂಶವನ್ನು ಬಳಸಿಕೊಳ್ಳಲಿದ್ದಾರೆ’ ಎಂದು ವಿಶ್ವಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಂಡೋನೇಷ್ಯಾ ಸರ್ಕಾರದ ಅನುಮೋದನೆಯೊಂದಿಗೆ ಸಭರವಾಲ್‌ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT