ಕರಾಚಿ: ದೆಹಲಿಯಿಂದ ಸೌದಿ ಅರೇಬಿಯಾದ ಜೆದ್ದಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು (6ಇ 63), ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಕಾರಣ ಕರಾಚಿಯ ಜಿನ್ನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ.

ದೆಹಲಿಯಿಂದ ಹೊರಟಿದ್ದ ವಿಮಾನವು ಪಾಕಿಸ್ತಾನದ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ, ಭಾರತ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ತೀವ್ರ ಅಸ್ವಸ್ಥಗೊಂಡರು. ಹೀಗಾಗಿ, ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ ಎಂದು ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ಮೂಲಗಳು ತಿಳಿಸಿವೆ.

‘ಪ್ರಯಾಣಿಕನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ವಿಮಾನವು ದೆಹಲಿಗೆ ಮರಳಿತು. ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆಯಾದ ನಂತರ, ವಿಮಾನವು ಪುನಃ ದೆಹಲಿಯಿಂದ ಜೆದ್ದಾಕ್ಕೆ ಹೊರಟಿತು’ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.