ಮೊನಾಡೊ (ಇಂಡೊನೇಷ್ಯಾ): ಉತ್ತರ ಸುಲಾವೆಸಿ ಪ್ರಾಂತ್ಯದ ಮೊನಾಡೋದ ವೃದ್ಧರ ವಸತಿ ಗೃಹವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 16 ಮಂದಿ ಮೃತಪಟ್ಟಿದ್ದಾರೆ.

‘ವೃದ್ಧರು ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 15 ಮಂದಿಯ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಕುಟಂಬಸ್ಥರ ನೆರವಿನ ಮೂಲಕ ಗುರುತು ಪತ್ತೆ ಮಾಡಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಅಕ್ಕಪಕ್ಕದವರು ನೆರವಿಗೆ ಬಂದಿದ್ದು, ವಸತಿ ಗೃಹದಲ್ಲಿದ್ದವರ ಪೈಕಿ 15 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳಕ್ಕೆ 2 ಗಂಟೆ ಸಮಯ ಬೇಕಾಯಿತು ಎಂದೂ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಿದ್ಯುತ್ ಪೂರೈಕೆಯಲ್ಲಿನ ಸಮಸ್ಯೆಯಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದ್ದು, ತನಿಖೆ ಮುಂದುವರಿದಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.