ಜಕಾರ್ತ: ಇಂಡೊನೇಷ್ಯಾದಲ್ಲಿ ಈಚೆಗೆ ಸಂಭವಿಸಿದ ವಿನಾಶಕಾರಿ ಪ್ರವಾಹ, ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 1,003ಕ್ಕೆ ಏರಿದೆ ಎಂದು ರಕ್ಷಣಾ ಸಿಬ್ಬಂದಿ ಶನಿವಾರ ಹೇಳಿದ್ದಾರೆ.

ಕಳೆದ ಹದಿನೈದು ದಿನಗಳಿಂದ ಸುಮಾತ್ರಾ ದ್ವೀಪವು ನೈಸರ್ಗಿಕ ವಿಕೋಪಕ್ಕೆ ತುತ್ತಾಗಿದ್ದು, ಈ ದುರಂತದಲ್ಲಿ 5,400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

12 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. 218 ಜನರು ಇನ್ನೂ ಕಾಣೆಯಾಗಿದ್ದಾರೆ. ಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚಬಹುದು ಎಂದಿದೆ.

‘ಇದೀಗ ಪರಿಸ್ಥಿತಿ ಸುಧಾರಿಸಿದೆ. ಹಲವು ಪ್ರದೇಶಗಳಿಗೆ ಸಂಪರ್ಕ ಸಾಧ್ಯವಾಗಿದೆ. ಪರಿಹಾರ ಕಾರ್ಯ ಚುರುಕುಗೊಂಡಿದೆ’ ಎಂದು ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಶನಿವಾರ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.