ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 800 ನಿವಾಸಿಗಳ ಸ್ಥಳಾಂತರ

Published 18 ಏಪ್ರಿಲ್ 2024, 4:56 IST
Last Updated 18 ಏಪ್ರಿಲ್ 2024, 4:56 IST
ಅಕ್ಷರ ಗಾತ್ರ

ಜಕಾರ್ತಾ: ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಪರ್ವತದ ತಪ್ಪಲಲಿದ್ದ ಕನಿಷ್ಠ 800 ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಉತ್ತರ ಸುಲವೆಸಿ ಪ್ರಾಂತ್ಯದ ದ್ವೀಪದಲ್ಲಿ ಬುಧವಾರ ಜ್ವಾಲಾಮುಖಿ ಸ್ಫೋಟಿಸಿದೆ. ಲಾವಾ ಹಾಗೂ ಬಿಸಿ ಬೂದಿ 3 ಕಿ.ಮೀ (ಎರಡು ಮೈಲುಗಳು) ಎತ್ತರಕ್ಕೆ ಚಿಮ್ಮಿದೆ. ಸ್ಫೋಟದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈವರೆಗೆ ಸುಮಾರು 800ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಪರ್ವತಕ್ಕೆ ಸಮುದ್ರ ಹೊಂದಿಕೊಂಡಿರುವ ಕಾರಣ ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಇಲ್ಲಿನ ಆಡಳಿತ ಎಚ್ಚರಿಕೆ ನೀಡಿದೆ. ಹಾಗಾಗಿ ಪ್ರಾಂತೀಯ ರಾಜಧಾನಿ ಮನಾಡೋದಲ್ಲಿ ವಿಮಾನ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.

ಸುರಕ್ಷತಾ ಹಿನ್ನೆಲೆ ವಾಯುಯಾನ ಅಧಿಕಾರಿಗಳು ಎಚ್ಚರಿಕೆ ನೀಡಿದ ಬಳಿಕ ಪೂರ್ವ ಮಲೇಷ್ಯಾ ಮತ್ತು ಬ್ರೂನಿಯಲ್ಲಿ 9 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

'ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಸುಮಾರು 1,500 ಜನರನ್ನು ತಕ್ಷಣವೇ ಸ್ಥಳಾಂತರಿಸುವ ಅಗತ್ಯವಿದೆ' ಎಂದು ವಿಪತ್ತು ನಿರ್ವಹಣಾ ಏಜೆನ್ಸಿಯ ವಕ್ತಾರ ಅಬ್ದುಲ್ ಮುಹಾರಿ ಹೇಳಿದ್ದಾರೆ. ಅಲ್ಲದೇ ತಗುಲಂಡಂಗ್‌ ದ್ವೀಪದಲ್ಲಿರುವ 12,000 ಜನರನ್ನು ಸ್ಥಳಾಂತರ ಮಾಡುವಂತೆ, ಪರ್ವತದಿಂದ 6 ಕಿ.ಮೀ.ದೂರದಲ್ಲಿರುವಂತೆ ತಿಳಿಸಲಾಗಿದೆ.

ಇಂಡೋನೇಷ್ಯಾದಲ್ಲಿ 1871 ರಲ್ಲಿ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಸುನಾಮಿಯಲ್ಲಿ ಸುಮಾರು 400 ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT