ಈ ಬಗ್ಗೆ ವಿವಿಧ ಸಾಮಾಜಿಕ ಜಾಲತಾಣಗಳ ಬಳಕೆದಾರರು ಟ್ವಿಟರ್ನಲ್ಲಿ #instagramdown ಎಂದು ಹಾಕಿ ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಹಾಸ್ಯದ ಮಿಮ್ಸ್ಗಳನ್ನು ಹಾಕಿದ್ದಾರೆ. ಗುರುವಾರ ಸಂಜೆಯಿಂದಇನ್ಸ್ಟಾಗ್ರಾಂನಲ್ಲಿ ಸಮಸ್ಯೆ ಕಂಡು ಬಂದಿದ್ದು ಲಕ್ಷಾಂತರ ಬಳಕೆದಾರರು ಲಾಗಿನ್ ಸಮಸ್ಯೆ ಎದುರಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಸಮಸ್ಯೆಯಾಗಿರುವುದನ್ನು ಒಪ್ಪಿಕೊಂಡಿರುವ ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್ಬುಕ್ ಒಡೆತನದ ಇನ್ಸ್ಟಾಗ್ರಾಂ ಕಂಪನಿಯೂ ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಟ್ವೀಟ್ಮಾಡಿದೆ.
We're aware that some people are having trouble accessing their Instagram accounts. We're working quickly to fix the issue. #instagramdown
ತಾಂತ್ರಿಕ ಕಾರಣಗಳಿಂದಾಗಿ ಕೆಲ ಬಳಕೆದಾರರಿಗೆ ಲಾಗಿನ್ನಲ್ಲಿ ಸಮಸ್ಯೆ ಎದುರಾಗಿದ್ದು ನಮ್ಮ ತಂತ್ರಜ್ಞರ ತಂಡ ಸಮಸ್ಯೆಯನ್ನು ಪರಿಸಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವುದಕ್ಕೆ ಬಳಕೆದಾರರಲ್ಲಿ ಕ್ಷಮೆಯಾಚಿಸುತ್ತೇವೆ ಎಂದು ಕಂಪನಿ ವಕ್ತಾರರು ತಿಳಿಸಿದ್ದಾರೆ.