ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Yoga Day: 180 ದೇಶಗಳ ಪ್ರತಿನಿಧಿಗಳ ಜತೆ ಅಮೆರಿಕದಲ್ಲಿ ಮೋದಿ ಯೋಗಾಭ್ಯಾಸ

Published 21 ಜೂನ್ 2023, 13:04 IST
Last Updated 21 ಜೂನ್ 2023, 13:04 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಆವರಣದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡಿದರು.

ಈ ಯೋಗ ದಿನದ ಕಾರ್ಯಕ್ರಮಕ್ಕೆ 180ಕ್ಕೂ ಹೆಚ್ಚು ದೇಶಗಳ ಜನರು ಪ್ರಧಾನಿ ನರೇಂದ್ರ ಮೋದಿ ಜತೆ ಸೇರಿದ್ದಾರೆ. ಸಮಾರಂಭದಲ್ಲಿ ರಾಜತಾಂತ್ರಿಕರು, ರಾಜಕೀಯ ಮುಖಂಡರು, ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಸೇರಿದಂತೆ ಹಲವಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಯೋಗ ದಿನಾಚರಣೆಯ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿಕೊಂಡಿದ್ದಾರೆ. 180ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT