ಎರಡೂ ದೇಶಗಳ ನಡುವಣ ಸಂಘರ್ಷವು ಈ ಹಂತದಿಂದ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ತಜ್ಞರು ಭೀತಿ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿಶ್ಲೇಷಕ ಜೋರ್ಡನ್ ಬರ್ಕಿನ್ ಅವರು, ‘ಇದು ಒಳ್ಳೆಯ ರೀತಿಯಲ್ಲಿ ಕೊನೆಗೊಳ್ಳುವುದಿಲ್ಲ. ಪ್ರಚೋದನೆಗೆ ಒಳಗಾದಾಗ ತ್ವರಿತವಾಗಿ ಹಾಗೂ ಬಲವಾಗಿ ಪ್ರತಿಕ್ರಿಯೆ ನೀಡುವುದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊದಲಿನಿಂದಲೂ ಪಾಲಿಸಿಕೊಂಡು ಬಂದಿದ್ದಾರೆ’ ಎಂದು ಹೇಳಿದ್ದಾರೆ.