ವಿಶ್ವಸಂಸ್ಥೆ: ತನ್ನ ಮೂರು ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಅಮೆರಿಕಕ್ಕೆ ತಕ್ಕ ತಿರುಗೇಟು ನೀಡುವುದಾಗಿ ಇರಾನ್ ಹೇಳಿಕೊಂಡಿದೆ.

ದಾಳಿಯ 'ಸಮಯ, ಸ್ವರೂಪ, ಪ್ರಮಾಣ' ನಾವು ನಿರ್ಧರಿಸುತ್ತೇವೆ ಎಂದು ವಿಶ್ವಸಂಸ್ಥೆಯಲ್ಲಿ ಇರಾನ್ನ ರಾಯಭಾರಿ ಅಮೀರ್ ಸಯೀದ್ ಇರಾವಿನಿ ಹೇಳಿದ್ದಾರೆ.

ರಾಜತಾಂತ್ರಿಕತೆಯನ್ನು ನಾಶಮಾಡಲು ಅಮೆರಿಕ ನಿರ್ಧರಿಸಿದೆ. ಈಗ ರಾಜತಾಂತ್ರಿಕತೆಯ ಸಮಯ ಮೀರಿದೆ. ಇರಾನ್ಗೆ ತನ್ನನ್ನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

'ಇರಾನ್ನ ಫೋರ್ಡೊ, ನಟಾನ್ಜ್ ಹಾಗೂ ಎಸ್ಫಹಾನ್ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ ನಡೆಸಿತ್ತು. ಆ ಮೂಲಕ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ನೇರ ಮಧ್ಯಪ್ರವೇಶ ಮಾಡಿತ್ತು.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ, ಮಾಸ್ಕೊಗೆ ತೆರಳಲಿದ್ದು, ರಷ್ಯಾ ಜೊತೆ ಸಮನ್ವಯ ಸಾಧಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಸಹ ಪ್ರತೀಕಾರ ತೀರಿಸುವುದಾಗಿ ಹೇಳಿದ್ದಾರೆ. ಅಮೆರಿಕ 'ನಮ್ಮ ಮೇಲೆ ದಾಳಿ ನಡೆಸಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಏನು ಮಾಡುತ್ತೀರಿ? ಸಹಜವಾಗಿಯೇ ದಾಳಿಯಿಂದಲೇ ಉತ್ತರ ನೀಡಬೇಕು' ಎಂದು ಹೇಳಿದ್ದಾರೆ.
.ಬಿ-2 ಬಾಂಬರ್ ಸೇಫ್ ಲ್ಯಾಂಡ್; ಇರಾನ್ನಲ್ಲಿ ಅಧಿಕಾರ ಬದಲಾವಣೆ: ಟ್ರಂಪ್ ಸೂಚನೆ.ಇರಾನ್ ಮೇಲೆ ಅಮೆರಿಕ ಬಾಂಬ್ ದಾಳಿ:‘Operation Midnight Hammer’ ಪೂರ್ಣ ಮಾಹಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.