ಇಸ್ಲಾಮಾಬಾದ್: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಅಮೆರಿಕದೊಂದಿಗಿನ ಎರಡನೇ ಸುತ್ತಿನ ಶಾಂತಿ ಮಾತುಕತೆಯ ಅನಿಶ್ಚಿತತೆಯ ಮಧ್ಯೆ, ಮೂರು ದಿನದ ಅವಧಿಯಲ್ಲಿ ಪಾಕಿಸ್ತಾನಕ್ಕೆ ಎರಡನೇ ಬಾರಿಗೆ ಭಾನುವಾರ ಬಂದಿಳಿದಿದ್ದಾರೆ.

ಪ್ರಧಾನಿ ಶೆಹಬಾಜ್ ಷರೀಫ್, ಸೇನಾ ಮುಖ್ಯಸ್ಥ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶನಿವಾರ ಒಮಾನ್ಗೆ ಹೋಗಿದ್ದ ಅರಾಘ್ಚಿ, ಅಲ್ಲಿನ ಸುಲ್ತಾನ್ ಹೈಥಮ್ ಬಿನ್ ತಾರಿಖ್ ಅಲ್–ಸೈದ್ ಅವರೊಂದಿಗೆ ಹೊರ್ಮುಜ್ ಜಲಸಂಧಿಯ ಭದ್ರತೆ ಹಾಗೂ ಇರಾನ್– ಅಮೆರಿಕ ನಡುವಿನ ಯುದ್ಧವನ್ನು ಕೊನೆಗೊಳಿಸುವ ಸಂಬಂಧದ ರಾಜತಾಂತ್ರಿಕ ಮಾತುಕತೆ ನಡೆಸಿದರು.

ಒಮಾನ್ನ ಒಂದು ದಿನದ ಭೇಟಿ ಪೂರ್ಣಗೊಳಿಸಿದ ನಂತರ ಇರಾನ್ ವಿದೇಶಾಂಗ ಸಚಿವರು ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಬಂದಿಳಿದರು ಎಂದು ‘ಡಾನ್’ ಪತ್ರಿಕೆ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪೆಜೆಶ್ಕಿಯಾನ್ -ಶೆಹಬಾಜ್ ಚರ್ಚೆ

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಇಸ್ಲಾಮಾಬಾದ್ಗೆ ಭೇಟಿ ನೀಡಿದ್ದಾಗಲೇ ಶನಿವಾರ ಸಂಜೆ ದೂರವಾಣಿ ಮೂಲಕ ಅವರು ಮಾತುಕತೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.