ನವದೆಹಲಿ (ಪಿಟಿಐ): ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಡೊನಾಲ್ಡ್ ಟ್ರಂಪ್ ಹೊಸ ಗಡುವು ವಿಧಿಸಿದ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಮತ್ತು ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸೀಂ ಅಲ್ ಥಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.

‘ಇರಾನ್ ವಿದೇಶಾಂಗ ಸಚಿವರಿಂದ ದೂರವಾಣಿ ಕರೆ ಸ್ವೀಕರಿಸಿ, ಪ್ರಸಕ್ತ ಸನ್ನಿವೇಶದ ಕುರಿತು ಮಾತುಕತೆ ನಡೆಸಿದೆ’ ಎಂದು ಜೈಶಂಕರ್ ಅವರು ಭಾನುವಾರ ತಡರಾತ್ರಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ, ಮಾತುಕತೆಯ ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ. ಅರಬ್ ಸಂಯುಕ್ತ ಸಂಸ್ಥಾನದ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಝಾಯೇದ್ ನಹ್ಯಾನ್ ಅವರೊಂದಿಗೂ ದೂರವಾಣಿ ಮುಖೇನ ಮಾತುಕತೆ ನಡೆಸಿದ್ದಾರೆ.

‘ಇಬ್ಬರೂ ವಿದೇಶಾಂಗ ಸಚಿವರು ದ್ವಿಪಕ್ಷೀಯ ಸಂಬಂಧಗಳು ಹಾಗೂ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ’ ಎಂದು ನವದೆಹಲಿಯಲ್ಲಿನ ಇರಾನ್ ರಾಯಭಾರ ಕಚೇರಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-4-851379301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.