ಟೆಹರಾನ್: ಅಮೆರಿಕ ಮತ್ತು ಇರಾನ್ ದೇಶಗಳು ಯುದ್ಧ ವಿರಾಮಕ್ಕೆ ಅಂಗೀಕರಿಸಿದ್ದು, ಗುರುವಾರ ಇರಾನ್ ಹೊರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸುವ ಹಡಗುಗಳಿಗೆ ಪರ್ಯಾಯ ಮಾರ್ಗಗಳನ್ನು ಘೋಷಿಸಿದೆ. ಪ್ರಮುಖ ಜಲಮಾರ್ಗದ ಮುಖ್ಯ ವಲಯದಲ್ಲಿ ಸ್ಫೋಟಕಗಳನ್ನು ಹುದುಗಿಸಿರುವ ಅಪಾಯದ ಹಿನ್ನೆಲೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಅದು ತಿಳಿಸಿದೆ.

ಎರಡು ವಾರಗಳ ಕದನ ವಿರಾಮ ಒಪ್ಪಂದದ ಭಾಗವಾಗಿ, ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಸರಬರಾಜಾಗುವ ಹೊರ್ಮುಜ್ ಜಲಸಂಧಿಯನ್ನು ತಾತ್ಕಾಲಿಕವಾಗಿ ಪುನಃ ತೆರೆಯಲು ಇರಾನ್ ಒಪ್ಪಿಕೊಂಡಿದೆ.

‘ಹೊರ್ಮುಜ್ ಜಲಸಂಧಿ ಮೂಲಕ ಹಾದುಹೋಗಲು ಉದ್ದೇಶಿಸಿರುವ ಎಲ್ಲ ಹಡಗುಗಳು ಸುರಕ್ಷತೆಯ ದೃಷ್ಟಿಯಿಂದ ಸಮುದ್ರದಲ್ಲಿ ಹುದುಗಿಸಿರುವ ಸ್ಫೋಟಕಗಳ ಅಪಾಯದ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ’ಎಂದು ಇರಾನ್ನ ಕ್ರಾಂತಿಕಾರಿ ಗಾರ್ಡ್ಸ್ ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪರ್ಯಾಯ ಮಾರ್ಗದ ಮೂಲಕ ಪ್ರವೇಶ ಮತ್ತು ನಿರ್ಗಮನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದೂ ವರದಿ ತಿಳಿಸಿದೆ.

ಫೆಬ್ರುವರಿ 28ರಂದು ಇರಾನ್ ಮೇಲೆ ದಾಳಿ ನಡೆಸಿದ್ದ ಅಮರಿಕ ಮತ್ತು ಇಸ್ರೇಲ್ ದೇಶಗಳು ಸರ್ವೋಚ್ಚ ನಾಯಕ ಅಯಾತೊಲ್ಲಾ ಖಮೇನಿಯನ್ನು ಕೊಂದಿದ್ದವು. ಅದಾದ ಬಳಿಕ ತಿರುಗಿಬಿದ್ದಿದ್ದ ಇರಾನ್, ಗಲ್ಫ್ ದೇಶಗಳಲ್ಲಿರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅಲ್ಲದೇ, ಮಾರ್ಚ್ನಿಂದ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು.

ಜಾಗತಿಕ ತೈಲ ಸರಬರಾಜಿನ ಪ್ರಮುಖ ಮಾರ್ಗಗಳಲ್ಲೊಂದಾದ ಹೊರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ತೈಲ ಬೆಲೆ ಗಗನಮುಖಿಯಾಗಿತ್ತು.
.ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್–ಅಮೆರಿಕ ನಡುವಿನ ಕದನ ವಿರಾಮ ಸ್ವಾಗತಿಸಿದ ಭಾರತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.