ಇಸ್ಲಾಮಾಬಾದ್: ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ, 48 ತಾಸಿನಲ್ಲಿ ಮೂರನೇ ಬಾರಿಗೆ ಪಾಕಿಸ್ತಾನಕ್ಕೆ ಭೇಟಿ ಕೊಟ್ಟಿದ್ದಾರೆ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಣ ಸಂಘರ್ಷವನ್ನು ಇತ್ಯರ್ಥಗೊಳಿಸಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಿದೆ.

ಎರಡನೇ ಸುತ್ತಿನ ಸಂಧಾನ ಮಾತುಕತೆಯ ಅನಿಶ್ಚಿತತೆ ನಡುವೆ ಮಧ್ಯವರ್ತಿ ಪಾಕಿಸ್ತಾನದ ಮೂಲಕ ಅಮೆರಿಕಕ್ಕೆ ಇರಾನ್ ಮೂರು ಹಂತದ ಪ್ರಸ್ತಾವನೆಯನ್ನು ಮುಂದಿಟ್ಟಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಅರಾಘ್ಚಿ ರಷ್ಯಾದಿಂದ ಮತ್ತೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.

ಕಳೆದ 48 ತಾಸಿನಲ್ಲಿ ಅರಾಘ್ಚಿ ಅವರ ಮೂರನೇ ಪಾಕಿಸ್ತಾನ ಭೇಟಿ ಇದಾಗಿದೆ. ಇದಕ್ಕೂ ಮೊದಲು ರಷ್ಯಾ ಹಾಗೂ ಒಮಾನ್ ದೇಶಗಳಿಗೂ ಅರಾಘ್ಚಿ ತೆರಳಿದ್ದಾರೆ.

ರಷ್ಯಾದಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಬಾಂಧವ್ಯ, ಪ್ರಾದೇಶಿಕ ಸಮಸ್ಯೆ, ಅಮೆರಿಕದೊಂದಿಗಿನ ಯುದ್ಧದ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಹಾಗೂ ಬೆಂಬಲಕ್ಕಾಗಿ ಪುಟಿನ್ ಅವರಿಗೆ ಅರಾಘ್ಚಿ ಧನ್ಯವಾದ ಸಲ್ಲಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಪುಟಿನ್ ಹೇಳಿದ್ದಾರೆ.

ಮತ್ತೊಂದೆಡೆ ಇರಾನ್ ಮುಂದೆ ಇಟ್ಟಿರುವ ಪ್ರಸ್ತಾವನೆ ಕುರಿತು ಚರ್ಚಿಸಲಾಗುವುದು ಎಂದು ಅಮೆರಿಕ ಹೇಳಿದೆ. ಅಮೆರಿಕ ವಿಧಿಸಿರುವ ನಿರ್ಬಂಧವನ್ನು ತೆರುವುಗೊಳಿಸುವುದು, ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸುವುದು ಹಾಗೂ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾವನೆಯಲ್ಲಿ ಒಳಗೊಂಡಿದೆ.
.ಪಾಕ್ನಲ್ಲಿ ನಡೆದ ಶಾಂತಿ ಮಾತುಕತೆ ವೈಫಲ್ಯಕ್ಕೆ ಅಮೆರಿಕವೇ ಕಾರಣ ಎಂದ ಅರಾಘ್ಚಿ.ನಿರ್ಬಂಧ ತೆರವಿಗಾಗಿ ಪಟ್ಟು | ಪ್ರತಿಯಾಗಿ ಹೊರ್ಮುಜ್ ತೆರವಿಗೆ ಸಿದ್ಧ: ಇರಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.