ಟೆಲ್ ಅವೀವ್: ಇರಾನ್ನ ಮೂರು ಅಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿರುವುದಕ್ಕೆ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೊಗಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವಿಡಿಯೊ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದು ಅತ್ಯಂತ ಯಶಸ್ವಿ ದಾಳಿಯಾಗಿದ್ದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಶಕ್ತಿಯ ಮೂಲಕವು ಶಾಂತಿ ಸ್ಥಾಪಿಸಬಹುದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮೊದಲು ಶಕ್ತಿ ಪ್ರದರ್ಶನವಾದರೆ ನಂತರ ಶಾಂತಿ ನೆಲೆಸುತ್ತದೆ ಎಂದು ಅವರು ಹೇಳಿದ್ದಾರೆ.

'ಇರಾನ್ನ ಫೋರ್ಡೊ, ನತಾನ್ಜ್ ಮತ್ತು ಎಸ್ಪಹಾನ್ ಅಣು ಕೇಂದ್ರಗಳಲ್ಲಿ ದಾಳಿ ನಡೆಸಲಾಗಿದೆ. ಎಲ್ಲ ವಿಮಾನಗಳು ಇರಾನ್ ವಾಯುಪ್ರದೇಶದಿಂದ ಸುರಕ್ಷಿತವಾಗಿ ಹೊರಗೆ ಬಂದಿವೆ. ಪ್ರಾಥಮಿಕ ಅಣು ಕೇಂದ್ರವಾದ ಫೋರ್ಡೊದಲ್ಲಿ ಪೂರ್ಣ ಪ್ರಮಾಣದ ಪೇಲೋಡ್ ಹೊಂದಿದ ಬಾಂಬ್ ದಾಳಿ ನಡೆಸಲಾಯಿತು' ಎಂದು ಟ್ರಂಪ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಟ್ರತ್'ನಲ್ಲಿ ಮಾಹಿತಿ ನೀಡಿದ್ದು, ಅಮೆರಿಕ ನಡೆಸಿರುವ ಕಾರ್ಯಾಚರಣೆಯ ಸಂಬಂಧ ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವುದಾಗಿ ತಿಳಿಸಿದ್ದಾರೆ.

'ಎಲ್ಲ ಯುದ್ಧ ವಿಮಾನಗಳು ಸುರಕ್ಷಿತವಾಗಿ ಹಿಂತಿರುಗುತ್ತಿವೆ. ಮಹಾನ್ ಅಮೆರಿಕದ ಯೋಧರಿಗೆ ಅಭಿನಂದನೆಗಳು. ಜಗತ್ತಿನ ಬೇರೆ ಯಾವುದೇ ಸೈನ್ಯಕ್ಕೆ ಇಂತಹ ಕಾರ್ಯಾಚರಣೆ ನಡೆಸಲು ಸಾಧ್ಯವಿಲ್ಲ. ಈಗ ಶಾಂತಿಯ ಸಮಯ!' ಎಂದು ಹೇಳಿದ್ದಾರೆ.
.Israel-Iran War | ಇರಾನ್ ಕ್ಷಿಪಣಿ ದಾಳಿ: ಇಸ್ರೇಲ್ನ 11 ಜನರ ಸಾವು.Israel Iran War | ಇಸ್ರೇಲ್–ಇರಾನ್ ಸಂಘರ್ಷ ತೀವ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.