ಅಮೆರಿಕ ಹಾಗೂ ಇಸ್ರೇಲ್ ಸೇರಿ ನಡೆಸಿದ ಜಂಟಿ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಟ್ರೂ ಪ್ರಾಮಿಸ್ 4’ ಹೆಸರಿನಲ್ಲಿ ಇರಾನ್ ಪ್ರತಿದಾಳಿ ನಡೆಸಿದೆ.
.ಇರಾನ್ನ ಯಾವ ನಗರಗಳ ಮೇಲೆ ಇಸ್ರೇಲ್, ಅಮೆರಿಕದಿಂದ ದಾಳಿ?.
ಪರ್ಷಿಯನ್ ಕೊಲ್ಲಿಯಲ್ಲಿರುವ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳ ಮೂಲಸೌಕರ್ಯ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಮಾಡಿದೆ.

ಬಹ್ರೇನ್ನ ಮನಾಮಾದಲ್ಲಿರುವ ಅಮೆರಿಕ ನೌಕಾಪಡೆಯ ‘5ನೇ ಫ್ಲೀಟ್’ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ದಾಳಿ ನಡೆದಿದೆ. ಈ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ ಎಂದು ‘ಅಲ್ ಜಜೀರಾ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ದಾಳಿ ತನ್ನ ಸಾರ್ವಭೌಮತ್ವದ ಮೇಲಿನ ಆಕ್ರಮಣ ಎಂದು ಬಹ್ರೇನ್ ಹೇಳಿದೆ.
.ಇರಾನ್ ಮೇಲೆ ಕ್ಷಿಪಣಿ ದಾಳಿ ಆರಂಭಿಸಿ ತುರ್ತು ಪರಿಸ್ಥಿತಿ ಘೋಷಿಸಿದ ಇಸ್ರೇಲ್.
ಯುನೈಟೆಡ್ ಅರಬ್ ಎಮಿರೇಟ್ಸ್ನ ಅಬುಧಾಬಿಯಲ್ಲಿರುವ ‘ಅಲ್ ದಫ್ರಾ’ ವಾಯುನೆಲೆಯ ಬಳಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಜನವಸತಿ ಪ್ರದೇಶದಲ್ಲಿ ಕ್ಷಿಪಣಿ ನಿರೋಧಕ ವ್ಯವಸ್ಥೆಯ ಅವಶೇಷಗಳು ಬಿದ್ದ ಪರಿಣಾಮ ಓರ್ವ ನಾಗರಿಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕತಾರ್ನಲ್ಲಿರುವ ಅಮೆರಿಕದ ಅತಿದೊಡ್ಡ ವಾಯುನೆಲೆ ‘ಅಲ್ ಉದೈದ್’ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಪೇಟ್ರಿಯಾಟ್ ವ್ಯವಸ್ಥೆ ಬಳಸಿ ತಡೆಹಿಡಿಯಲಾಗಿದೆ, ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ ಎಂದು ಕತಾರ್ ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್ನಲ್ಲಿರುವ ಅಲ್ ಸಾಲೆಮ್ ವಾಯುನೆಲೆಯ ಮೇಲೂ ಇರಾನ್ ದಾಳಿ ನಡೆಸಿದ್ದು, ದಾಳಿ ತಡೆಯಲು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಕುವೈಟ್ ತಿಳಿಸಿದೆ.

(ವಿವಿಧ ಸುದ್ದಿ ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)
.ಭಾರತಕ್ಕೆ ಸಿಗಲಿದೆಯೇ ಐರನ್ ಡೋಮ್ ತಂತ್ರಜ್ಞಾನ?: ಮೋದಿ ಇಸ್ರೇಲ್ ಭೇಟಿಯಲ್ಲಿ ಚರ್ಚೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.