ಟೆಹರಾನ್: ಇತ್ತೀಚಿನ ಘಟನೆಗಳು ರಷ್ಯಾದೊಂದಿಗಿನ ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಜಗತ್ತಿಗೆ ತೋರಿಸಿವೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಮಂಗಳವಾರ(ಏ.28) ಹೇಳಿದ್ದಾರೆ.

ಏ.27ರಂದು ಅಬ್ಬಾಸ್ ಅರಾಘ್ಚಿ ಅವರು ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದರು.

ಪಶ್ಚಿಮ ಏಷ್ಯಾ ಸಂಘರ್ಷವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ರಷ್ಯಾ, ರಾಜತಾಂತ್ರಿಕ ಬೆಂಬಲವನ್ನು ನೀಡಲು ಮುಂದಾಗಿದೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಇರಾನ್ ಮೇಲಿನ ಅಮೆರಿಕ – ಇಸ್ರೇಲ್ ದಾಳಿಯನ್ನು ಖಂಡಿಸಿದ್ದ ರಷ್ಯಾ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಪುನಃಸ್ಥಾಪಿಸಲು ಮಧ್ಯಸ್ಥಿಕೆ ವಹಿಸಲು ಮುಂದಾಗಿತ್ತು.

ಇರಾನ್ನೊಂದಿಗಿನ ಅಮೆರಿಕದ ಘರ್ಷಣೆಗೆ ಕಾರಣ ಎನ್ನಲಾದ ಸಮೃದ್ಧೀಕರಿಸಿದ ಯುರೇನಿಯಂ ಅನ್ನು ನಾವು ಸಂಗ್ರಹಿಸಿಟ್ಟುಕೊಳ್ಳುತ್ತೇವೆ ಎಂದು ರಷ್ಯಾ, ಆಶ್ವಾಸನೆ ನೀಡಿದೆ.

ಕದನ ವಿರಾಮದ ನಡುವೆಯೂ ಅಮೆರಿಕ–ಇರಾನ್ ಬಿಕ್ಕಟ್ಟು ಮುಂದುವರಿದಿದೆ. ಈ ನಡುವೆಯೇ ಅಬ್ಬಾಸ್ ಅರಾಘ್ಚಿ ಅವರು ಪಾಕಿಸ್ತಾನ, ಒಮಾನ್ ಬಳಿಕ ರಷ್ಯಾಗೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.