ನವದೆಹಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ ಎಂದು ಇರಾನ್ನ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ.

’ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ. ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ‘ ಎಂದು ಭಾರತದಲ್ಲಿನ ಇರಾನ್ ಸರ್ವೋಚ್ಚ ನಾಯಕರ ಪ್ರತಿನಿಧಿ ಆಗಿರುವ ಆಯತೊಲ್ಲಾ ಡಾ.ಅಬ್ದುಲ್ ಮಜೀದ್ ಹಕೀಮೆಲಾಹಿ ಸ್ಪಷ್ಟಪಡಿಸಿದ್ದಾರೆ.

’ಖಮೇನಿ ಅವರ ಸ್ಥಾನಕ್ಕೆ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ವರದಿಗಳು ಸುಳ್ಳು. ಇರಾನ್ನಲ್ಲಿ ಚುನಾವಣೆಯ ಮೂಲಕ 88 ಸದಸ್ಯರ ತಜ್ಞರ ಮಂಡಳಿಯನ್ನು ರಚಿಸಲಾಗಿದೆ. ಈ ಮಂಡಳಿಯು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುತ್ತದೆ. ಮಂಡಳಿಯು ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲು ಈಗಷ್ಟೇ ಮಾತುಕತೆ ಆರಂಭಿಸಿದೆ’ ಎಂದಿದ್ದಾರೆ.

‘ಮಂಡಳಿಯ ಸದಸ್ಯರು ಸಾಕಷ್ಟು ಚರ್ಚೆಗಳನ್ನು ನಡೆಸಿದ ಬಳಿಕ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುತ್ತಾರೆ. ಆದರೆ, ಸದ್ಯಕ್ಕೆ ಪರಿಸ್ಥಿತಿ ಸರಿಯಾಗಿಲ್ಲ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿವೆ. ಹೀಗಾಗಿ, ಮಂಡಳಿಗೆ ಯಾವ ಸಮಯ ಔಚಿತ್ಯವೋ ಆ ಸಂದರ್ಭದಲ್ಲಿ ಸಭೆ ಸೇರಿ, ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆ’ ಎಂದೂ ಅವರು ಹೇಳಿದ್ದಾರೆ.

‘ಇರಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸದಾ ಸಿದ್ಧವಾಗಿದೆ’ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.