ದುಬೈ: ಇರಾನ್ ಬೆಂಬಲಿತ ಪ್ರತಿರೋಧ ಗುಂಪುಗಳು ತನ್ನ ಬೆಂಬಲದೊಂದಿಗೆ ಇಸ್ರೇಲ್ ವಿರುದ್ಧದ ಹೋರಾಟವನ್ನು ಮುಂದುವರಿಸಲಿವೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಕೀರ್ ಕಲಿಬಫ್ ಭಾನುವಾರ ಹೇಳಿದ್ದಾರೆ.
ಈ ಕುರಿತು ಸರ್ಕಾರಿ ಮಾಧ್ಯಮಗಳು ವರದಿ ಮಾಡಿದ್ದು, ಹಿಜ್ಬುಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆಗೆ ಸಂಬಂಧಿಸಿದಂತೆ ಮೊಹಮ್ಮದ್ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿಸಿವೆ.
ಏತನ್ಮಧ್ಯೆ, ಲೆಬನಾನ್ ಸಾರ್ವಭೌಮತೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗುವುದನ್ನು ವಿರೋಧಿಸುವುದಾಗಿ ಚೀನಾ ಹೇಳಿದೆ.
ಹಿಜ್ಬುಲ್ಲಾ ಸಂಘಟನೆಯ ಹಲವು ನಾಯಕರು ಲೆಬನಾನ್‌ನ ದಕ್ಷಿಣ ಬೈರೂತ್‌ನ ದಾಹಿಯಾ ಪ್ರದೇಶದಲ್ಲಿ ಶುಕ್ರವಾರ (ಸೆಪ್ಟೆಂಬರ್ 17ರಂದು) ಸಭೆ ಸೇರಿದ್ದರು. ಈ ಸಭೆಯಲ್ಲಿ ನಸ್ರಲ್ಲಾ ಭಾಗವಹಿಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇಸ್ರೇಲ್ ಸೇನೆ, ವಾಯುದಾಳಿ ನಡೆಸಿತ್ತು. ನಸ್ರಲ್ಲಾ ಮಾತ್ರವಲ್ಲದೆ, ಸಂಘಟನೆಯ ಕಮಾಂಡರ್ ಅಲಿ ಕರ್ಕಿ ಸಹ ಮೃತಪಟ್ಟಿದ್ದರು.