ಟೆಹರಾನ್: ಯುದ್ಧ ಶಮನಕ್ಕೆ ಅಮೆರಿಕ ಜೊತೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಹೊರ್ಮುಜ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನು ನಿಯಂತ್ರಿಸಲು ಇರಾನ್ ಹೊಸ ಕಾರ್ಯವಿಧಾನವನ್ನು ಅನಾವರಣಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಿರಿಯ ಸಂಸದರೊಬ್ಬರು ತಿಳಿಸಿದ್ದಾರೆ. ಇದರಲ್ಲಿ ವಿಶೇಷ ಸಾರಿಗೆ ಸೇವೆಗಳು ಎಂದು ಗೊತ್ತುಪಡಿಸಿ ಟೋಲ್ ಸಹ ವಿಧಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿರುವ ಹೊರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ ನಿರ್ದಿಷ್ಟ ಟೋಲ್ ಶುಲ್ಕ ವಿಧಿಸುವ ಕಾರ್ಯವಿಧಾನವನ್ನು ಸಿದ್ಧಪಡಿಸಿರುವುದಾಗಿ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ ಹೇಳಿದ್ದಾರೆ.

‘ಇರಾನ್, ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಅಂತರರಾಷ್ಟ್ರೀಯ ವ್ಯಾಪಾರ ಭದ್ರತೆಯ ಖಾತರಿಯ ಚೌಕಟ್ಟಿನೊಳಗೆ, ಹೊರ್ಮುಜ್ ಜಲಸಂಧಿಯಲ್ಲಿ ಗೊತ್ತುಪಡಿಸಿದ ಮಾರ್ಗದಲ್ಲಿ ಸಂಚಾರವನ್ನು ನಿರ್ವಹಿಸಲು ವೃತ್ತಿಪರ ಕಾರ್ಯವಿಧಾನವನ್ನು ಸಿದ್ಧಪಡಿಸಿದೆ. ಅದನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು’ ಎಂದು ಅಜೀಜಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ದ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಪ್ರಸ್ತಾವಿತ ವ್ಯವಸ್ಥೆಯು ಇರಾನ್ ಜೊತೆ ಸಹಕಾರ ಹೊಂದಿರುವ ದೇಶಗಳು ಮತ್ತು ವಾಣಿಜ್ಯ ಹಡಗುಗಳಿಗೆ ಅನುಕೂರವಾಗಿದೆ ಎಂದು ಅದು ತಿಳಿಸಿದೆ. ಶತ್ರು ದೇಶಗಳಿಗೆ ಸಂಚಾರ ನಿರ್ಬಂಧ ಮುಂದುವರಿಯುತ್ತದೆ ಎಂದು ಹೇಳಿದೆ.

ಈ ಮೂಲಕ ಜಗತ್ತಿನ ಐದನೇ ಒಂದರಷ್ಟು ತೈಲ ಸರಬರಾಜಾಗುವ ಜಲಸಂಧಿಯಲ್ಲಿನ ಸಂಚರಣೆ ನಿಯಮಗಳಲ್ಲಿನ ಯಾವುದೇ ಅಡಚಣೆ ಅಥವಾ ಬದಲಾವಣೆ ಅಂತರರಾಷ್ಟ್ರೀಯ ಇಂಧನ ಮಾರುಕಟ್ಟೆಗಳು ಮತ್ತು ಹಡಗು ವೆಚ್ಚದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು ಎಂದು ವರದಿ ತಿಳಿಸಿದೆ.

ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ದೀರ್ಘಕಾಲದ ಮಿಲಿಟರಿ ಸಂಘರ್ಷದ ನಂತರ ಹೆಚ್ಚಿದ ಪ್ರಾದೇಶಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ಘೋಷಣೆ ಬಂದಿದೆ.

ಕಾರ್ಯತಂತ್ರದ ಜಲಮಾರ್ಗಗಳ ಮೇಲೆ ಸಾರ್ವಭೌಮ ನಿಯಂತ್ರಣವನ್ನು ಪ್ರತಿಪಾದಿಸುವ ಹೊತ್ತಲ್ಲಿ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳನ್ನು ಕಾಪಾಡುವ ವಿಶಾಲ ಪ್ರಯತ್ನಗಳ ಭಾಗವಾಗಿ ಇರಾನಿನ ಅಧಿಕಾರಿಗಳು ಹೊಸ ಪ್ರಸ್ತಾಪವನ್ನು ರೂಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹೊರ್ಮುಜ್ ಜಲಸಂಧಿಯಲ್ಲಿ ನಿರ್ಬಂಧಗಳನ್ನು ವಿಧಿಸುವ ಮೂಲಕ ದೇಶವು ಅಮೆರಿಕ-ಇಸ್ರೇಲ್ ಮಿಲಿಟರಿ ಕ್ರಮಗಳ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ. ಈ ಕ್ರಮವು ಜಾಗತಿಕ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನ ಬೆಲೆಗಳಲ್ಲಿ ತೀವ್ರ ಏರಿಕೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.