ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಇಂದು (ಬುಧವಾರ) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಜೈಶಂಕರ್ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ನೀಡಿದ್ದಾರೆ.
.Iran Protest: ಇರಾನ್ ಬಿಟ್ಟು ತೆರಳುವಂತೆ ಭಾರತೀಯರಿಗೆ ಸೂಚನೆ.Iran Protest: 2,500ಕ್ಕೂ ಅಧಿಕ ಮಂದಿ ಸಾವು; ತ್ವರಿತ ವಿಚಾರಣೆಗೆ ಮುಂದಾದ ಇರಾನ್.
'ಇರಾನ್ನ ಬೆಳವಣಿಗೆ ಹಾಗೂ ಒಟ್ಟಾರೆ ಸ್ಥಿತಿಗತಿಯ ಕುರಿತು ನಾವು ಚರ್ಚಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

ಈ ಮೊದಲು ಭದ್ರತೆ ಗಮನದಲ್ಲಿಟ್ಟುಕೊಂಡು ತನ್ನ ನಾಗರಿಕರು ಅಲ್ಲಿಂದ ತೆರಳುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರ್ದೇಶನ ನೀಡಿತ್ತು.

ಅಮೆರಿಕ ಭದ್ರತಾ ಸಿಬ್ಬಂದಿ ಸ್ಥಳಾಂತರ...

ಇರಾನ್ನಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ತನ್ನ ಪ್ರಾದೇಶಿಕ ನೆಲೆಗಳಿಂದ ಭದ್ರತಾ ಸಿಬ್ಬಂದಿಯನ್ನು ಸ್ಥಳಾಂತರಗೊಳಿಸುವಂತೆ ಅಮೆರಿಕ ಸೂಚಿಸಿದೆ ಎಂದು ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ, ಒಂದು ವೇಳೆ ದಾಳಿ ನಡೆಸಿದರೆ ಅಮೆರಿಕದ ಪ್ರಾದೇಶಿಕ ನೆಲೆಗಳ ಮೇಲೂ ದಾಳಿ ನಡೆಸುವುದಾಗಿ ಇರಾನ್ ಎಚ್ಚರಿಸಿತ್ತು.

ಈ ಹಿನ್ನೆಲೆಯಲ್ಲಿ ತನ್ನ ನಾಗರಿಕರ ಭದ್ರತೆ ಹಾಗೂ ಮಿಲಿಟರಿ ಸೌಲಭ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಮೆರಿಕ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.