ವಿಶ್ವಸಂಸ್ಥೆ: ಯಾವುದೇ ಒಪ್ಪಂದಗಳು ಕೂಡ ರಾತ್ರೋರಾತ್ರಿ ಆಗುವುದಿಲ್ಲ, ಅದಕ್ಕೆ ಸಮಯ ಬೇಕಾಗುತ್ತದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನವು ಯಶಸ್ವಿಯಾಗುವ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಹೇಳಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್ನಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ನಡೆದಿದ್ದ 21 ಗಂಟೆಗಳ ಮಾತುಕತೆಯು ಯಾವುದೇ ಅಂತಿಮ ಒಪ್ಪಂದಕ್ಕೆ ಬರದೇ ವಿಫಲವಾಗಿತ್ತು.

ಇರಾನ್ ಮತ್ತು ಅಮೆರಿಕವು ಮಾತುಕತೆಯನ್ನು ಮುಂದುವರಿಸಬೇಕು ಹಾಗೂ ಕದನ ವಿರಾಮದ ಪರಿಸ್ಥಿತಿಯನ್ನು ಉಳಿಸಿಕೊಳ್ಳಬೇಕು. ಇಸ್ಲಾಮಾಬಾದ್ನಲ್ಲಿ ನಡೆದ ಮಾತುಕತೆಯು ಯುದ್ಧ ನಿಲ್ಲಿಸುವ ಕುರಿತು ಆಶಾಕಿರಣ ಮೂಡಿಸಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಂಧಾನದಲ್ಲಿ ಮಹತ್ತರ ಪಾತ್ರವಹಿಸಿರುವ ಪಾಕಿಸ್ತಾನ, ಸೌದಿ ಅರೇಬಿಯಾ, ಈಜಿಪ್ಟ್ ಹಾಗೂ ಟರ್ಕಿಗೆ ಧನ್ಯವಾದ ತಿಳಿಸಿದ್ದಾರೆ.

ಮಾತುಕತೆಯ ವೇಳೆ ನಾವು ಪ್ರಸ್ತಾವನೆ ಸಲ್ಲಿಸಿದ್ದು, ಇರಾನ್ ಅದಕ್ಕೆ ಒಪ್ಪಿಕೊಂಡಿಲ್ಲ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹೇಳಿದ್ದರು. ಇರಾನ್ ಕೂಡ ಅಮೆರಿಕ ತನ್ನ ಹಟಮಾರಿ ನಿಲುವನ್ನು ಬಿಟ್ಟರೆ ಮಾತ್ರ ಒಪ್ಪಂದ ಸಾಧ್ಯ ಎಂದು ಹೇಳಿತ್ತು.

ಇದೀಗ ಎರಡು ದೇಶಗಳ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯುವ ವಿಶ್ವಾಸವಿದೆ ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ಫೆ.28ರಂದು ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದರಿಂದ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ಪರಿಸ್ಥಿತಿ ಉಂಟಾಗಿತ್ತು. ಸದ್ಯ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.