ಟೆಹರಾನ್: ಇರಾನ್ನ ಪರಮಾಣು ಘಟಕಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಇಸ್ಲಾಮಿಕ್ ರಿಪಬ್ಲಿಕ್ ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ, ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸುವುದಾಗಿ ಶಪಥ ಮಾಡಿದ್ದಾರೆ.

'ಇರಾನ್ ಮೇಲೆ ದಾಳಿ ನಡೆಸುವ ಮೂಲಕ ಜಿಯೋನಿಸ್ಟ್ ಶತ್ರು ದೊಡ್ಡ ತಪ್ಪು ಎಸಗಿದೆ. ದೊಡ್ಡ ಅಪರಾಧ ಮಾಡಿದೆ. ಅದಕ್ಕೆ ತಕ್ಕ ಶಿಕ್ಷೆಯಾಗಲಿದೆ. ಶಿಕ್ಷೆ ಈಗಿನಿಂದಲೇ ಮುಂದುವರಿಯಲಿದೆ' ಎಂದು ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಖಮೇನಿ ಪೋಸ್ಟ್ ಹಂಚಿದ್ದಾರೆ.

ಇರಾನ್ನ ಫೋರ್ಡೊ, ನಟಾನ್ಜ್ ಹಾಗೂ ಎಸ್ಫಹಾನ್ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ಬಾಂಬ್ ದಾಳಿ ನಡೆಸಿತ್ತು. ಆ ಮೂಲಕ ಇಸ್ರೇಲ್-ಇರಾನ್ ನಡುವಣ ಸಂಘರ್ಷದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡಿತ್ತು.

ಅಮೆರಿಕ ವಿರುದ್ಧ ಪ್ರತೀಕಾರ ತೀರಿಸುವುದಾಗಿ ಇರಾನ್ನ ಹಲವು ನಾಯಕರು ಈಗಾಗಲೇ ಹೇಳಿಕೊಂಡಿದ್ದಾರೆ.
.ಇರಾನ್ ಮೇಲೆ ಅಮೆರಿಕ ದಾಳಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ: ವಿಶ್ವಸಂಸ್ಥೆ.ಬಿ-2 ಬಾಂಬರ್ ಸೇಫ್ ಲ್ಯಾಂಡ್; ಇರಾನ್ನಲ್ಲಿ ಅಧಿಕಾರ ಬದಲಾವಣೆ: ಟ್ರಂಪ್ ಸೂಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.