ವಾಷಿಂಗ್ಟನ್: 'ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಇರಾನ್ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಆದರೆ ಅಮೆರಿಕಕ್ಕೆ ತೃಪ್ತಿಯಾಗಿಲ್ಲ' ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

'ರಾಜತಾಂತ್ರಿಕ ಮಾತುಕತೆ ಹಾಗೂ ಬಿಕ್ಕಟ್ಟು ಇತ್ಯರ್ಥಕ್ಕೆ ಟೆಹರಾನ್ ಮೇಲೆ ಹೆಚ್ಚಿನ ಒತ್ತಡ ಇದೆ' ಎಂದು ಅವರು ಹೇಳಿದ್ದಾರೆ.

ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಸಾಧಿಸಿರುವ ರಾಜತಾಂತ್ರಿಕ ಪ್ರಗತಿಯೂ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂಬುದನ್ನು ಟ್ರಂಪ್ ಒಪ್ಪಿಕೊಂಡಿದ್ದಾರೆ. 'ಈವರೆಗೆ ನಾವು ತೃಪ್ತರಾಗಿಲ್ಲ. ಆದರೆ ಕೂಡಲೇ ಅದನ್ನು ನಿರೀಕ್ಷೆ ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.

'ಇರಾನ್ಗೆ ಒಪ್ಪಂದ ಮಾಡಿಕೊಳ್ಳದೇ ಅನ್ಯ ಮಾರ್ಗವಿಲ್ಲ' ಎಂದೂ ಸಹ ಟ್ರಂಪ್ ಹೇಳಿದ್ದಾರೆ.

ಇರಾನ್ ಅಣ್ವಸ್ತ್ರ ಹೊಂದಲು ಬಿಡುವುದಿಲ್ಲ

'ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬದ್ಧರಾಗಿದ್ದೇವೆ. ಈ ಸಂಬಂಧ ಮಧ್ಯಂತರ ಚುನಾವಣೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ಟ್ರಂಪ್ ಹೇಳಿದ್ದಾರೆ.

ಸಂಪುಟ ಸಭೆಯಲ್ಲಿ ಮಾತನಾಡಿದ ಟ್ರಂಪ್, 'ಯಾವ ಕಾರಣಕ್ಕೂ ಇರಾನ್ ಅಣ್ವಸ್ತ್ರ ಹೊಂದಲು ಬಿಡುವುದಿಲ್ಲ. ನಾನಿದನ್ನು ಇಡೀ ಜಗತ್ತಿಗಾಗಿ ಮಾಡುತ್ತಿದ್ದೇನೆ' ಎಂದು ಪುನರುಚ್ಚರಿಸಿದ್ದಾರೆ.

ಹೊರ್ಮುಜ್ ಜಲಸಂಧಿಯ ಬಗ್ಗೆ ಪ್ರತಿಕ್ರಿಯಿಸುತ್ತಾ, 'ಹೊರ್ಮುಜ್ ಎಲ್ಲರಿಗೂ ಮುಕ್ತವಾಗಿರುತ್ತದೆ. ಇದು ಅಂತರರಾಷ್ಟ್ರೀಯ ಸಾಗರ ಪ್ರದೇಶವಾಗಿದೆ. ಅಲ್ಲಿ ಯಾರೂ ನಿಯಂತ್ರಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
.ಶ್ವೇತಭವನದ ಬಳಿಯೇ ಟ್ರಂಪ್ ಟಾರ್ಗೆಟ್: ಇಲ್ಲಿ ಏನೆಲ್ಲ ಭದ್ರತೆಗಳಿವೆ ಗೊತ್ತೇ ?.ಇರಾನ್ ಜೊತೆಗಿನ ಮಾತುಕತೆಯಲ್ಲಿ ಟ್ರಂಪ್ ಎಚ್ಚರಿಕೆಯ ಹೆಜ್ಜೆ: ಮಾರ್ಕೊ ರುಬಿಯೊ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.