ಇಸ್ಲಾಮಾಬಾದ್: ಅಮೆರಿಕ ಜೊತೆಗಿನ ಎರಡನೇ ಸುತ್ತಿನ ಶಾಂತಿ ಮಾತುಕತೆಯ ಅನಿಶ್ಚಿತತೆಯ ನಡುವೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಮೂರು ದಿನಗಳಲ್ಲಿ ಎರಡನೇ ಬಾರಿಗೆ ಭಾನುವಾರ ಪಾಕಿಸ್ತಾನಕ್ಕೆ ಬಂದಿಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಪ್ರಧಾನಿ ಶೆಹಬಾಜ್ ಷರೀಫ್, ರಕ್ಷಣಾ ಪಡೆಗಳ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಶನಿವಾರ ಹೊರಟಿದ್ದ ಅರಾಘ್ಚಿ, ಒಮಾನ್ನಲ್ಲಿ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅಲ್-ಸೈದ್ ಅವರೊಂದಿಗೆ ಹೊರ್ಮುಜ್ ಜಲಸಂಧಿಯಲ್ಲಿ ಭದ್ರತೆ ಮತ್ತು ಇರಾನ್-ಅಮೆರಿಕ ಸಂಘರ್ಷವನ್ನು ಕೊನೆಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳ ಕುರಿತು ಮಾತುಕತೆ ನಡೆಸಿ ಮತ್ತೆ ಪಾಕಿಸ್ತಾನಕ್ಕೆ ಹಿಂದಿರುಗಿದ್ದಾರೆ.

ಒಮಾನ್ಗೆ ಒಂದು ದಿನದ ಭೇಟಿ ಕೈಗೊಂಡಿದ್ದ ಅವರು, ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಗೆ ಬಂದಿಳಿದಿದ್ದಾರೆ ಎಂದು ಡಾನ್ ಪತ್ರಿಕೆ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಇಸ್ಲಾಮಾಬಾದ್ನಲ್ಲಿ ತಮ್ಮ ಅಲ್ಪಾವಧಿಯ ವಾಸ್ತವ್ಯದ ಸಮಯದಲ್ಲಿ ಅವರು ಹಿರಿಯ ಪಾಕಿಸ್ತಾನಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ನಂತರ, ಮಾಸ್ಕೊಗೆ ತೆರಳಲಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಇರಾನ್ನ ಅಧಿಕೃತ ಸುದ್ದಿ ಸಂಸ್ಥೆ ಐಆರ್ಎನ್ಎ, ಅರಾಘ್ಚಿ ಸಂಜೆ ಪಾಕ್ಗೆ ಆಗಮಿಸಿದ್ದಾರೆ ಎಂದು ಖಚಿತಪಡಿಸಿದೆ.

ಅರಾಘ್ಚಿ ಆಗಮನದ ಬಗ್ಗೆ ಪಾಕಿಸ್ತಾನ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೆ, ಜಿಯೊ ನ್ಯೂಸ್ ಸೇರಿದಂತೆ ಖಾಸಗಿ ಮಾಧ್ಯಮಗಳು ಇರಾನ್ ವಿದೇಶಾಂಗ ಸಚಿವರು ಮಾಸ್ಕೊಗೆ ತೆರಳುವ ಮೊದಲು ಅಲ್ಪಾವಧಿ ಪ್ರವಾಸದಲ್ಲಿ ಪಾಕಿಸ್ತಾನಕ್ಕೆ ಆಗಮಿಸುತ್ತಾರೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದವು.

"ಯುದ್ಧ ಸಂಪೂರ್ಣವಾಗಿ ಕೊನೆಗೊಳಿಸುವ ಕುರಿತಾದ ಚೌಕಟ್ಟಿನ ಬಗ್ಗೆ ಇರಾನ್ನ ನಿಲುವುಗಳು ಮತ್ತು ಅಭಿಪ್ರಾಯಗಳನ್ನು ಅರಾಘ್ಚಿ ತಿಳಿಸುತ್ತಾರೆ’ಎಂದು ಇರಾನ್ ಸುದ್ದಿ ಸಂಸ್ಥೆ ಐಎಸ್ಎನ್ಎ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.