ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್‌ ರಾಯಭಾರಿ ಕಚೇರಿ ಮೇಲೆ ದಾಳಿ: ಐಎಸ್ ಶಂಕಿತನ ಬಂಧನ

Last Updated 5 ಡಿಸೆಂಬರ್ 2022, 11:58 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಅಘ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿನ ಪಾಕಿಸ್ತಾನಿ ರಾಯಭಾರ ಕಚೇರಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಗುಂಡಿನ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

‘ಐಎಸ್‌ ಶಂಕಿತನನ್ನು ಬಂಧಿಸಲಾಗಿದೆ.ಕೆಲ ವಿದೇಶಿ ಶಕ್ತಿಗಳು ದಾಳಿ ಹಿಂದೆ ಇವೆ. ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವುದು ಇದರ ಉದ್ದೇಶವಾಗಿತ್ತು’ ಎಂದುತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಸೋಮವಾರ ಟ್ವೀಟ್‌ ಮಾಡಿದ್ದಾರೆ.

ಸಮೀಪದ ಕಟ್ಟಡವೊಂದರಿಂದ ರಾಯಭಾರ ಕಚೇರಿಯ ಮೇಲೆ ಗುಂಡು ಹಾರಿಸಲಾಗಿತ್ತು. ಇದು ದಕ್ಷಿಣ ಏಷ್ಯಾದ ಎರಡು ನೆರೆಹೊರೆಯವರ ನಡುವೆ ಉದ್ವಿಗ್ನತೆ ಹೆಚ್ಚಿಸಿತ್ತು.

ದಾಳಿ ನಡೆದ ವೇಳೆ ಕಾಬೂಲ್‌ನಲ್ಲಿರುವ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರು ರಾಯಭಾರ ಕಚೇರಿಯ ಕಾಂಪೌಂಡ್‌ ಒಳಗಿನ ಹುಲ್ಲುಹಾಸಿನ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಅವರಿಗೆ ಹಾನಿಯಾಗಲಿಲ್ಲ. ಭದ್ರತಾ ಸಿಬ್ಬಂದಿ ಒಬ್ಬರು ಗಾಯಗೊಂಡರು.

ಖೊರಾಸಾನ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಾದೇಶಿಕ ಅಂಗಸಂಸ್ಥೆ ಮತ್ತು ಅಫ್ಗಾನಿಸ್ತಾನದ ಆಡಳಿತಾರೂಢ ತಾಲಿಬಾನ್‌ನ ಪ್ರತಿಸ್ಪರ್ಧಿ ಶುಕ್ರವಾರದ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.

‘ತನ್ನ ಇಬ್ಬರು ಹೋರಾಟಗಾರರು ರಾಯಭಾರ ಕಚೇರಿ ಅಂಗಳದಲ್ಲಿದ್ದ ಪಾಕಿಸ್ತಾನಿ ರಾಯಭಾರಿ ಮತ್ತು ಅವನ ಭದ್ರತಾ ಪಡೆ ಮೇಲೆ ದಾಳಿ ನಡೆಸಿದರು’ಇಸ್ಲಾಮಿಕ್ ಸ್ಟೇಟ್ ಗ್ರೂಪ್ ಹೇಳಿದೆ. ಆದರೆ, ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT