ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಇಶಾಖ್ ದರ್‌ ನೂತನ ವಿದೇಶಾಂಗ ಸಚಿವ

Published 12 ಮಾರ್ಚ್ 2024, 14:04 IST
Last Updated 12 ಮಾರ್ಚ್ 2024, 14:04 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ನಾಲ್ಕು ಬಾರಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಇರುವ ಮುಹಮ್ಮದ್ ಇಶಾಖ್ ದರ್ ಅವರಿಗೆ ವಿದೇಶಾಂಗ ಖಾತೆ ನೀಡಲಾಗಿದೆ. 

ಭಾರತ, ಅಫ್ಗಾನಿಸ್ತಾನ ಸೇರಿದಂತೆ ನೆರೆಯ ದೇಶಗಳೊಂದಿಗೆ ಹಲವು ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವ ಸ್ಥಾನವು ಮಹತ್ವದ್ದಾಗಿದೆ. ಇಂಥ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳಲ್ಲಿ ಕಡಿಮೆ ಅನುಭವ ಹೊಂದಿರುವ ದರ್ ಅವರಿಗೆ ಪ್ರಮುಖ ಖಾತೆ ನೀಡಲಾಗಿದೆ.

ಕಾಶ್ಮೀರಿ ಜನಾಂಗದ ದರ್ ಅವರು ವೃತ್ತಿಯಿಂದ ಚಾರ್ಟಡ್ ಅಕೌಂಟೆಂಟ್ ಆಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್–ನವಾಜ್ (ಪಿಎಂಎಲ್‌–ಎನ್‌) ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಜತೆಗೆ ಪಕ್ಷದ ವರಿಷ್ಠ ನವಾಜ್ ಷರೀಫ್ ಅವರ ನಂಬಿಕಸ್ಥ ಬೆಂಬಲಿಗರಾಗಿದ್ದಾರೆ.    

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT