ಗಾಜಾ : ಉತ್ತರ ಗಾಜಾದಲ್ಲಿದ್ದ ಪ್ಯಾಲೆಸ್ಟೀನ್ ಪೊಲೀಸ್ ಪೋಸ್ಟ್ ಒಂದನ್ನು ಗುರಿಯಾಗಿಸಿ ಇಸ್ರೇಲ್ ಶನಿವಾರ ವೈಮಾನಿಕ ದಾಳಿ ನಡೆಸಿದೆ. ಘಟನೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಹಾಗೂ 13 ವರ್ಷದ ಬಾಲಕ ಮೃತಪಟ್ಟಿದ್ದಾರೆ.

ಪೊಲೀಸ್ ನಿರ್ದೇಶನಾಲಯವು ಈ ಕುರಿತಂತೆ ಮಾಹಿತಿ ನೀಡಿದ್ದು, ತವಾಮ್ ಪ್ರದೇಶದಲ್ಲಿನ ಪೊಲೀಸ್ ಪೋಸ್ಟ್ ಅನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ಎರಡು ಕ್ಷಿಪಣಿಗಳು ಪೋಸ್ಟ್ಗೆ ಅಪ್ಪಳಿಸಿವೆ. ಇದರಿಂದ ಬಾಲಕನೂ ಸೇರಿದಂತೆ 6 ಮಂದಿ ಮೃತಪಟ್ಟಿರುವುದು ಮಾತ್ರವಲ್ಲದೇ ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಇಸ್ರೇಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.