ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Israel Hamas War: ಗಾಜಾ ಆಸ್ಪತ್ರೆಯ ಐಸಿಯುನಲ್ಲಿ ಶಿಶುಗಳ ಕೊಳೆತ ಶವಗಳು ಪತ್ತೆ

Published 9 ಡಿಸೆಂಬರ್ 2023, 5:23 IST
Last Updated 9 ಡಿಸೆಂಬರ್ 2023, 5:23 IST
ಅಕ್ಷರ ಗಾತ್ರ

ಗಾಜಾ ಪಟ್ಟಿ: ಗಾಜಾದ ಅಲ್-ನಾಸ್ರ್ ಆಸ್ಪತ್ರೆಯ ಐಸಿಯುನಲ್ಲಿ ಶಿಶುಗಳ ಕೊಳೆತ ಶವಗಳು ಪತ್ತೆಯಾಗಿವೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಗಾಜಾ ಮೂಲದ ವರದಿಗಾರ ಮೊಹಮದ್ ಬಲೂಶಾ ಅವರು ಆಸ್ಪತ್ರೆಯ ವಿಡಿಯೊವನ್ನು ಚಿತ್ರೀಕರಿಸಿದ್ದಾರೆ. ಆಸ್ಪತ್ರೆಯ ಐಸಿಯುನಲ್ಲಿ ಹಾಸಿಗೆ ಮೇಲೆ ಮಲಗಿಸಿರುವ ನಾಲ್ಕು ಶಿಶುಗಳ ಅವಶೇಷಗಳು ಕಂಡು ಬಂದಿವೆ.

ಇಸ್ರೇಲ್ –ಹಮಾಸ್‌ ಸಂಘರ್ಷದಿಂದಾಗಿ ಅಲ್-ನಾಸ್ರ್ ಮತ್ತು ಅಲ್-ರಾಂಟಿಸಿ ಮಕ್ಕಳ ಆಸ್ಪತ್ರೆಗಳನ್ನು ನವೆಂಬರ್‌ 10ರಂದು ತರಾತುರಿಯಲ್ಲಿ ಸ್ಥಳಾಂತರಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸ್ಥಳಾಂತರಿಸಲು ಸಾಧ್ಯವಾಗದ ಶಿಶುಗಳನ್ನು ಆಸ್ಪತ್ರೆ ಸಿಬ್ಬಂದಿ ಐಸಿಯುನಲ್ಲಿ ಬಿಟ್ಟುಹೋಗಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಐಸಿಯುನಲ್ಲಿ ಆಮ್ಲಜನಕದ ಕೊರತೆ ಮತ್ತು ಆಂಬ್ಯುಲೆನ್ಸ್‌ ಸೌಕರ್ಯ ಇಲ್ಲದ ಕಾರಣ ಶಿಶುಗಳು ಮೃತಪಟ್ಟಿರುವ ಸಾಧ್ಯತೆ ಇದೆ. ಸ್ಥಳಾಂತರಿಸುವ ಮುನ್ನವೇ ಇಬ್ಬರು ಮಕ್ಕಳು ಮೃತಪಟ್ಟಿದ್ದರು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು.

ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಸುಮಾರು 1,200 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ 17,400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 40 ಸಾವಿರ ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT