ಟೆಲ್ ಅವೀವ್: ಲೆಬನಾನ್ನಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದೆ. ಹಿಜ್ಬುಲ್ಲಾದ 70ಕ್ಕೂ ಅಧಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಲೆಬನಾನ್ನಲ್ಲಿ ಮಿಲಿಟರಿ ದಾಳಿ ತೀವ್ರಗೊಳಿಸುವಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆದೇಶ ಹೊರಡಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

'ಇಸ್ರೇಲ್ ಪಡೆಗಳನ್ನು ಗುರಿಯಾಗಿಸಿಕೊಂಡು ಹಿಜ್ಬುಲ್ಲಾ ಡ್ರೋನ್ ದಾಳಿ ನಡೆಸುತ್ತಿದೆ. ಇದರಿಂದಾಗಿ ನಮ್ಮ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲು ಆದೇಶಿಸಿದ್ದೇನೆ' ಎಂದು ನೆತನ್ಯಾಹು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ವಾಯುಪಡೆಯ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಲೆಬನಾನ್ನ ರಾಷ್ಟ್ರೀಯ ಸುದ್ದಿಸಂಸ್ಥೆ (ಎನ್ಎನ್ಎ) ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ.

ಇರಾನ್ ಬೆಂಬಲಿತ ಹಿಜ್ಬುಲ್ಲಾ ಬಂಡುಕೋರರ ವಿರುದ್ಧ ಬೃಹತ್ ಮಟ್ಟದ ಕಾರ್ಯಾಚರಣೆ ನಡೆಸಲು ಅಮೆರಿಕ ಅನುಮತಿ ನೀಡುವ ಸಾಧ್ಯತೆ ಇದೆ ಎಂಬ ವರದಿಯ ಬೆನ್ನಲ್ಲೇ, ಕಾರ್ಯಾಚರಣೆ ತೀವ್ರಗೊಳಿಸುವಂತೆ ನೆತನ್ಯಾಹು ಆದೇಶ ಹೊರಡಿಸಿದ್ದಾರೆ.

'ನಾವು ಹಿಜ್ಬುಲ್ಲಾ ವಿರುದ್ಧ ಯುದ್ಧದಲ್ಲಿದ್ದೇವೆ. ನಮ್ಮ ಧೀರ ಯೋಧರು ಈಗಾಗಲೇ 600ಕ್ಕೂ ಅಧಿಕ ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ' ಎಂದು ನೆತನ್ಯಾಹು ಹೇಳಿದ್ದಾರೆ.

ಏತನ್ಮಧ್ಯೆ ದಕ್ಷಿಣ ಇರಾನ್ನ ಕ್ಷಿಪಣಿ ತಾಣಗಳನ್ನು ಗುರಿಯಾಗಿಸಿ ಅಮೆರಿಕ ದಾಳಿ ನಡೆಸಿದೆ. ಇದರಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಹಾಗೂ ಶಾಂತಿ ಮಾತುಕತೆಗೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದೆ.
.ಇರಾನ್–ಅಮೆರಿಕ ಮಾತುಕತೆ: ಮುಗಿಯದ ಗೊಂದಲ, ಸದ್ಯಕ್ಕಿಲ್ಲ ಯುದ್ಧಕ್ಕೆ ಅಂತ್ಯ.ಕದನ ವಿರಾಮದ ನಡುವೆ ಇರಾನ್ ಮೇಲೆ ದಾಳಿ ನಡೆಸಿದ ಅಮೆರಿಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.