ವಾಷಿಂಗ್ಟನ್: ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಇರಾನ್, ಹೊರ್ಮುಜ್ ಜಲಸಂಧಿಯನ್ನು ಮುಚ್ಚಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಬುಧವಾರ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಪರಸ್ಪರ ಒಪ್ಪಿಗೆ ಸೂಚಿಸಿದ್ದವು. ಇದರ ಭಾಗವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಒಪ್ಪಿಕೊಂಡಿತ್ತು.

ಆದರೆ, ಅಮೆರಿಕ–ಇರಾನ್ ಕದನ ವಿರಾಮಕ್ಕೆ ಸಮ್ಮತಿಸಿ ಸೂಚಿಸಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಲೆಬನಾನ್ ಮೇಲೆ ದಾಳಿ ಮುಂದುವರಿಸುವುದಾಗಿ ಹೇಳಿದ್ದಾರೆ. ಅದರಂತೆ ಹಿಜ್ಬುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ಇಂದು ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದು ಇರಾನ್ ಆಕ್ರೋಶಕ್ಕೆ ಕಾರಣವಾಗಿದೆ.

ಕದನ ವಿರಾಮದಿಂದ ಹೊರಬರುವ ಎಚ್ಚರಿಕೆ:

ಇಸ್ರೇಲ್ನಿಂದ ಲೆಬನಾನ್ ಮೇಲೆ ದಾಳಿ ಮುಂದುವರಿದರೆ ಇರಾನ್ ಕದನ ವಿರಾಮದಿಂದ ಹೊರಬರುವ ಸಾಧ್ಯತೆಯಿದೆ ಎಂದು ಇರಾನ್ನ ತಸ್ನಿಮ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರು ಪಾಕಿಸ್ತಾನ ಸೇನೆಯ ಮುಖ್ಯಸ್ಥ ಜನರಲ್ ಅಸೀಂ ಮುನೀರ್ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ, ‘ಇರಾನ್ ಮತ್ತು ಲೆಬನಾನ್ನಲ್ಲಿ ಇಸ್ರೇಲ್ ಕದನ ವಿರಾಮ ಉಲ್ಲಂಘಿಸಿದೆ’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.