ರಾಮಲ್ಲಾ: ವೆಸ್ಟ್ ಬ್ಯಾಂಕ್‌ನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್‌ನ ರೆಡ್ ಕ್ರೆಸೆಂಟ್ ಆ್ಯಂಬುಲೆನ್ಸ್ ಸರ್ವೀಸ್ ಶನಿವಾರ ತಿಳಿಸಿದೆ.
ಸ್ಫೋಟದ ವೇಳೆ 19ರಿಂದ 25 ವರ್ಷದೊಳಗಿನ ಐದು ಮಂದಿ ಪುರುಷರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಕ್ರೆಸೆಂಟ್ ಆ್ಯಂಬುಲೆನ್ಸ್ ಹೇಳಿದೆ.
ನಬ್ಲುಸ್ ನಗರದಲ್ಲಿರುವ ಬಲಾಟ ಶಿಬಿರದ ಮೇಲೆ ನಡೆದಿರುವ ದಾಳಿಯ ಬಗ್ಗೆ ಇಸ್ರೇಲ್ ಸೇನೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
1967ರ ಮಧ್ಯಪ್ರಾಚ್ಯ ಯುದ್ಧ ಸಂದರ್ಭ ವೆಸ್ಟ್ ಬ್ಯಾಂಕ್ ಪ್ರದೇಶವನ್ನು ಇಸ್ರೇಲ್ ವಶಪಡಿಸಿಕೊಂಡಿದೆ.
ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್‌ನಲ್ಲಿ ಅಕ್ಟೋಬರ್ 7ರಂದು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ, ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ. ವೆಸ್ಟ್ ಬ್ಯಾಂಕ್‌ನಲ್ಲಿ ಸಂಘರ್ಷ ತೀವ್ರಗೊಂಡಿದೆ.
ವಿಶ್ವಸಂಸ್ಥೆಯ ಅಂಕಿ–ಅಂಶಗಳ ಪ್ರಕಾರ, ಸಂಘರ್ಷ ಆರಂಭವಾದಾಗಿನಿಂದ ವೆಸ್ಟ್ ಬ್ಯಾಂಕ್‌ನಲ್ಲಿ 51 ಮಕ್ಕಳು ಸೇರಿದಂತೆ ಕನಿಷ್ಠ 186 ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.