ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ನಿಂದ ಹೊರಟ 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ

Published 14 ಅಕ್ಟೋಬರ್ 2023, 1:52 IST
Last Updated 14 ಅಕ್ಟೋಬರ್ 2023, 1:52 IST
ಅಕ್ಷರ ಗಾತ್ರ

ಜೆರುಸಲೇಂ: ಇಸ್ರೇಲ್‌ನಿಂದ ಹೊರಟ 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ ಟೆಲ್‌ ಅವೀವ್‌‌ನಿಂದ ನವದೆಹಲಿಯತ್ತ ಪ್ರಯಾಣ ಬೆಳೆಸಿದೆ.

ಈ ಕುರಿತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಇಸ್ರೇಲ್‌ನಿಂದ ಸ್ವದೇಶಕ್ಕೆ ಮರಳಲು ಬಯಸುವವರನ್ನು ಕರೆತರಲು ಭಾರತವು ಗುರುವಾರ ‘ಆಪರೇಷನ್‌ ಅಜಯ್‌’ ಕಾರ್ಯಾಚರಣೆ ಆರಂಭಿಸಿತ್ತು.

ಮೊದಲ ತಂಡದಲ್ಲಿ ಐವರು ಕನ್ನಡಿಗರು ಸೇರಿದಂತೆ 212 ಭಾರತೀಯರು ತಾಯ್ನಾಡಿಗೆ ಆಗಮಿಸಿದ್ದರು. ಇಸ್ರೇಲ್‌ನಿಂದ ವಿಶೇಷ ವಿಮಾನದಲ್ಲಿ ಬಂದ ಭಾರತೀಯರನ್ನು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಸ್ವಾಗತಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT