ಜೆರುಸಲೇಂ: ಕೋವಿಡ್ ಸೋಂಕು ತಗುಲಿರುವುದರಿಂದ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರ ಭಾರತ ಭೇಟಿಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.

ಭಾರತ–ಇಸ್ರೇಲ್‌ನ ರಾಜ ತಾಂತ್ರಿಕ ಸಂಬಂಧದ 30ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಬೆನೆಟ್ ಅವರು ಏಪ್ರಿಲ್ 3ರಿಂದ 5ರ ವರೆಗೆ ಭಾರತ ಪ್ರವಾಸ ಕೈಗೊಳ್ಳಬೇಕಿತ್ತು. ಭಾನುವಾರ ಬೆನೆಟ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಬೆನೆಟ್ ಪ್ರಧಾನಿಯಾದ ಬಳಿಕ ಭಾರತಕ್ಕೆ ಇದು ಮೊದಲ ಭೇಟಿಯಾಗಿತ್ತು. ಭೇಟಿ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವೆ ತಂತ್ರಜ್ಞಾನ, ಭದ್ರತೆ, ಸೈಬರ್, ಕೃಷಿ ಮತ್ತುಹವಾಮಾನ ಬದಲಾವಣೆ ಕುರಿತು ಸಹಕಾರ ವಿಸ್ತರಣೆ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.