ದೇರ್ ಅಲ್ ಬಲಾಹ್ (ಗಾಜಾ ಪಟ್ಟಿ): ಇಸ್ರೇಲ್ ಸೇನೆಯು ಗಾಜಾ ಪಟ್ಟಿಯಾದ್ಯಂತ ನಡೆಸಿರುವ ವೈಮಾನಿಕ ದಾಳಿಯಲ್ಲಿ ಐವರು ಮಕ್ಕಳು ಸೇರಿ 20 ಜನರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಾ ನಗರದಲ್ಲಿ ನೆಲೆ ಕಳೆದುಕೊಂಡಿರುವ ಜನರು ಆಶ್ರಯ ಪಡೆದಿದ್ದ ವಸತಿ ಶಾಲೆ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಮೂರು ಮಕ್ಕಳು ಸೇರಿ ಎಂಟು ಜನರು ಸತ್ತಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.

ದೇರ್ ಅಲ್ ಬಲಾಹ್ ನಗರದ ಕೇಂದ್ರ ಭಾಗದಲ್ಲಿರುವ ಮನೆಯೊಂದರ ಮೇಲೆ ಶನಿವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಮಕ್ಕಳು ಸೇರಿ ಎಂಟು ಜನರು ಹತರಾಗಿದ್ದಾರೆ ಎಂದು ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ವೈದ್ಯ ಅಧಿಕಾರಿಗಳು ಹೇಳಿದ್ದಾರೆ.

ದಕ್ಷಿಣದ ನಗರ ಖಾನ್ ಯೂನಿಸ್ನಲ್ಲಿ ಭಾನುವಾರ ನಡೆದ ದಾಳಿಯಲ್ಲಿ ದಂಪತಿ, ಗಾಜಾ ನಗರದಲ್ಲಿ ಕಾರಿನ ಮೇಲೆ ಆಗಿರುವ ದಾಳಿಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜನವಸತಿ ಪ್ರದೇಶದಲ್ಲಿ ಅಡಗಿದ್ದ ಹಮಾಸ್ ಉಗ್ರರ ಮೇಲೆ ನಿಖರ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ.

ಏತನ್ಮಧ್ಯೆ, ಇಸ್ರೇಲ್ ಅಧಿಕಾರಿಗಳು ಕ್ಯಾಥೋಲಿಕ್ ಚರ್ಚ್ನ ಮುಖ್ಯಸ್ಥ ಕಾರ್ಡಿನಲ್ ಪಿಯರ್ಬಟಿಸ್ಟಾ ಪಿಜ್ಜಾಬಲ್ಲಾ ಅವರಿಗೆ ಗಾಜಾ ಪ್ರವೇಶಿಸಲು ಮತ್ತು ಈ ಪ್ರದೇಶದಲ್ಲಿ ಸಣ್ಣ ಸಮುದಾಯವೆನಿಸಿರುವ ಕ್ರೈಸ್ತರೊಂದಿಗೆ ಕ್ರಿಸ್ಮಸ್ ಆಚರಿಸಲು ಅನುಮತಿ ನೀಡಿದ್ದಾರೆ.

14 ತಿಂಗಳಿಗಿಂತಲೂ ಹೆಚ್ಚು ಅವಧಿಯಿಂದ ಗಾಜಾದಲ್ಲಿ ಹಮಾಸ್ ವಿರುದ್ಧ ಯುದ್ಧದಲ್ಲಿ ತೊಡಗಿರುವ ಇಸ್ರೇಲ್ ಸೇನೆ ನಿತ್ಯ ದಾಳಿ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.