ಗಾಜಾ: ಇಸ್ರೇಲ್ ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನಿರಾಶ್ರಿತ ಶಿಬಿರವಾಗಿ ಪರಿವರ್ತಿಸಲಾದ ಶಾಲೆ ಮತ್ತು ಮನೆಯೊಂದರ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಶಾಲೆಯಲ್ಲಿ ಆಶ್ರಯ ಪಡೆದಿದ್ದ ಕನಿಷ್ಠ 25 ಮಂದಿ ಮೃತಪಟ್ಟಿರುವ ಸಾಧ್ಯತೆಯಿದೆ. ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಐದು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 15 ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

‘ಶಾಲೆಯ ಮೇಲೆ ನಡೆದ ದಾಳಿಯಲ್ಲಿ 55ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜನರು ಮಲಗಿದ್ದಾಗ ಶಾಲೆಯ ಮೇಲೆ ಮೂರು ಬಾರಿ ದಾಳಿ ನಡೆಸಲಾಗಿದೆ’ ಎಂದು ಸಚಿವಾಲಯದ ತುರ್ತು ಸೇವೆಯ ಮುಖ್ಯಸ್ಥ ಫಾಹ್ಮಿ ಅವದ್ ಹೇಳಿದ್ದಾರೆ. ಮೃತರಲ್ಲಿ ಒಬ್ಬ ತಂದೆ ಮತ್ತು ಅವರ ಐದು ಮಕ್ಕಳು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದಾಳಿಗೆ ಶಾಲೆಯ ಕಟ್ಟಡದಲ್ಲಿರುವ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ರಕ್ಷಣಾ ಕಾರ್ಯಕರ್ತರು ಬೆಂಕಿಯನ್ನು ನಂದಿಸಲು ಹೆಣಗಾಡುತ್ತಿರುವುದನ್ನು ಮತ್ತು ಕಟ್ಟಡದಡಿ ಸಿಲುಕಿರುವ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದಾಗಿದೆ.

ಗಾಜಾದಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಈವರೆಗೆ ಸುಮಾರು 54 ಸಾವಿರ ಪ್ಯಾಲೇಸ್ಟಿನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.