ವಾಷಿಂಗ್ಟನ್: ಅಫ್ಗಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಐಸಿಸ್ ಖುರಾಸನ್ (ISIS-K) ಉಗ್ರರನ್ನು ಗುರಿಯಾಗಿಸಿ ಅಮೆರಿಕ ನಡೆಸಿರುವ ಪ್ರತಿದಾಳಿಯಲ್ಲಿ ಅಮಾಯಕ ನಾಗರಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಅಮೆರಿಕ ತಪ್ಪೊಪ್ಪಿಕೊಂಡಿದೆ.

ಅಮೆರಿಕ ಸೆಂಟ್ರಲ್ ಕಮಾಂಡ್ನ ಕಮಾಂಡರ್ ಜನರಲ್ ಫ್ರಾಂಕ್ ಮೆಕೆಂಜಿ ಈ ಕುರಿತು ತಪ್ಪೊಪ್ಪಿಕೊಂಡಿದ್ದು, ಕ್ಷಮೆಯಾಚಿಸಿದ್ದಾರೆ. ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 10 ನಾಗರಿಕರು ಮೃತಪಟ್ಟಿದ್ದರು.

ಇದನ್ನೂ ಓದಿ:ಚೀನಾವನ್ನು ಎದುರಿಸಲು ಅಮೆರಿಕ ಹೊಸ ಮೈತ್ರಿಕೂಟ: ಯುರೋಪ್, ಫ್ರಾನ್ಸ್ ಆಕ್ರೋಶ

ಕಾಬೂಲ್ನ ಹಮೀದ್ ಕರ್ಝಾಯಿ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಅಮೆರಿಕದ 13 ಯೋಧರು ಸೇರಿದಂತೆ 100ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದರು.

'ಸಂಪೂರ್ಣವಾಗಿ ತನಿಖೆ ನಡೆಸಿದ ಬಳಿಕ ಡ್ರೋನ್ ದಾಳಿಯಲ್ಲಿ ಮಕ್ಕಳು ಸೇರಿದಂತೆ 10 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಇದು ನಮ್ಮಿಂದಾಗಿರುವ ತಪ್ಪಾಗಿದೆ. ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಓರ್ವ ಕಮಾಂಡರ್ ಆಗಿ ಈ ದಾಳಿಯ ದುರಂತದ ಸಂಪೂರ್ಣ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.

ಅಫ್ಗಾನಿಸ್ತಾನದಿಂದ ಅಮೆರಿಕ ಸೇನೆ ನಿರ್ಗಮನದ ಅಂತಿಮ ಹಂತದಲ್ಲಿ ದಾಳಿ ನಡೆದಿತ್ತು. ವಿಮಾನ ನಿಲ್ದಾಣದಲ್ಲಿ ಅಮೆರಿಕ ಸೇನೆಯ ವಿರುದ್ಧ ಇಸ್ಲಾಮಿಕ್ ಸ್ಟೇಟ್ಉಗ್ರರಿಂದ ಎದುರಾಗಬಹುದಾಗಿದ್ದ ಮತ್ತಷ್ಟು ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರತಿದಾಳಿ ನಡೆಸಲಾಗಿತ್ತು ಎಂದು ಪೆಂಟಗನ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.