ರೋಮ್: ದೇಶದಲ್ಲಿಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು ಧರಿಸುವುದನ್ನು ಇಟಲಿ ಸರ್ಕಾರವು ಕಡ್ಡಾಯಗೊಳಿಸಲು ಮುಂದಾಗಿದೆ ಎಂದು ಆರೋಗ್ಯ ಸಚಿವರಾಬರ್ಟೊ ಸ್ಪೆರಾನ್ಜಾ ಮಂಗಳವಾರ ತಿಳಿಸಿದರು.
‘ದೇಶದಾದ್ಯಂತ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯ ಮಾಡಲು ಸಿದ್ಧತೆ ನಡೆಯುತ್ತಿದೆ‘ ಎಂದು ಅವರು ಹೇಳಿದರು.
ಇಟಲಿಯಲ್ಲಿ ಬೇಸಿಗೆ ವೇಳೆ ನಿತ್ಯ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿತ್ತು. ಆದರೆ ಕಳೆದ ಕೆಲ ವಾರಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.