ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

New Year: ಎಲ್ಲರಿಗಿಂತ ಮೊದಲು ಹೊಸ ವರ್ಷ ಸ್ವಾಗತಿಸಿದವು ಈ ದೇಶಗಳು

ಹೊಸ ವರ್ಷ 2024 ಅನ್ನು ಸ್ವಾಗತಿಸಲು ಜನ ವಿಶ್ವದಾದ್ಯಂತ ತುದಿಗಾಲ ಮೇಲೆ ನಿಂತಿದ್ದಾರೆ. ಈಗಾಗಲೇ ಕೆಲವು ದೇಶಗಳಲ್ಲಿ ಹೊಸ ವರ್ಷ ಬಂದಾಗಿದೆ.
Published 31 ಡಿಸೆಂಬರ್ 2023, 14:44 IST
Last Updated 31 ಡಿಸೆಂಬರ್ 2023, 14:44 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷ 2024 ಅನ್ನು ಸ್ವಾಗತಿಸಲು ಜನ ವಿಶ್ವದಾದ್ಯಂತ ತುದಿಗಾಲ ಮೇಲೆ ನಿಂತಿದ್ದಾರೆ. ಈಗಾಗಲೇ ಕೆಲವು ದೇಶಗಳಲ್ಲಿ ಹೊಸ ವರ್ಷ ಬಂದಾಗಿದೆ.

ಫೆಸಿಫಿಕ್ ಸಾಗರದ ಕಿರಿಬತಿ (Kiribati) ಎಂಬ ದ್ವೀಪ ರಾಷ್ಟ್ರ 2024ರ ಹೊಸ ವರ್ಷವನ್ನು ಮೊದಲು ಸ್ವಾಗತಿಸಿತು. ನಂತರ ಅದರ ಸನಿಹದ ನ್ಯೂಜಿಲ್ಯಾಂಡ್ ಹೊಸ ವರ್ಷವನ್ನು ಸ್ವಾಗತಿಸಿದವು.

ಆ ನಂತರ ಆಸ್ಟ್ರೇಲಿಯಾ, ಜಪಾನ್ ಹಾಗೂ ದಕ್ಷಿಣ ಕೊರಿಯಾ ಹೊಸ ವರ್ಷ ಸ್ವಾಗತಿಸಿದವು. ಆಸ್ಟ್ರೇಲಿಯಾದ ನಗರ ಸಿಡ್ನಿಯ ಒಪೆರಾ ಹೌಸ್ ಬಳಿ ಚಿತ್ತಾಕರ್ಷಕ ಬಾಣ ಬಿರುಸುಗಳನ್ನು ಸಿಡಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.

ವಿಶ್ವದ ಅನೇಕ ಪ್ರವಾಸಿ ತಾಣಗಳಲ್ಲಿ 2023ರ ಸೂರ್ಯಾಸ್ತವನ್ನು ಕಣ್ತುಂಬಿಕೊಂಡು ಹೊಸ ವರ್ಷ ಸ್ವಾಗತಿಸಲು ಕಾತರರಾಗಿದ್ದಾರೆ. ರಾತ್ರಿಯಿಡಿ ಸಂಭ್ರಮಾಚರಣೆಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇತ್ತ ಭಾರತದಲ್ಲೂ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದ್ದು ವರ್ಷದ ಕೊನೆ ದಿನ ಭಾನುವಾರವಾಗಿದ್ದರಿಂದ ಪ್ರವಾಸಿ ತಾಣಗಳು, ಹೋಟೆಲ್, ರೆಸಾರ್ಟ್, ರೆಸ್ಟೊರಂಟ್‌ಗಳು ತುಂಬಿ ತುಳುಕುತ್ತಿವೆ.

2023ಕ್ಕೆ ಗುಡ್ ಬೈ ಹೇಳಿ, ಹೊಸ ವರ್ಷ 2024 ಸ್ವಾಗತಿಸಲು ಜನ ಕಾತರರಾಗಿದ್ದು ನವ ಕನಸು–ಹೊಸ ಆಶಯ ಹೊತ್ತು ಸ್ವಾಗತಿಸಲು ಕಾಯುತ್ತಿದ್ದಾರೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT