ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ವೇತಭವನದ ಸಿಬ್ಬಂದಿಗೆ ಕೋವಿಡ್‌ ಸೋಂಕು

Last Updated 9 ಮೇ 2020, 16:06 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಉಪಾಧ್ಯಕ್ಷ ಮೈಕ್‌ ಪೆನ್ಸ್‌ ಪತ್ರಿಕಾ ಕಾರ್ಯದರ್ಶಿ ಕೇಟಿ ಮಿಲ್ಲರ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಕೇಟಿ‌ ಮಿಲ್ಲರ್‌ ಪತಿ ಸ್ಟೀಫನ್‌ ಮಿಲ್ಲರ್‌ ಟ್ರಂಪ್‌ ಅವರ ಉನ್ನತ ಮಟ್ಟದ ಸಲಹೆಗಾರ. ಅವರಿಗೆ ಸೋಂಕು ತಗುಲಿದೆಯೇ ಎಂಬುದು ತಿಳಿದುಬಂದಿಲ್ಲ. ಪೆನ್ಸ್‌ ಜೊತೆಯೂ ಅವರು ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ.

ಶ್ವೇತಭವನಕ್ಕೂ ವೈರಸ್‌ ಸೋಂಕು ಹಬ್ಬುತ್ತಿರುವ ಬಗ್ಗೆ ಆತಂಕ ಪಡಬೇಕಾಗಿಲ್ಲ. ಸೋಂಕು ನಿಯಂತ್ರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

ಇವಾಂಕಾ ಆಪ್ತ ಸಹಾಯಕಿಗೂ ಸೋಂಕು: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ ಇವಾಂಕಾ ಟ್ರಂಪ್‌ ಆಪ್ತ ಸಹಾಯಕಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದ, ಶ್ವೇತಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.ಆದರೆ, ಸೋಂಕಿತ ಸಿಬ್ಬಂದಿ ಕಳೆದ ಕೆಲವು ವಾರಗಳಿಂದ ಇವಾಂಕಾ ಸಂಪರ್ಕದಲ್ಲಿ ಇರಲಿಲ್ಲ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಇವಾಂಕಾ ಮತ್ತು ಆಕೆಯ ಪತಿ ಜೇರೆಡ್ ಕುಶ್ನರ್ ಅವರ ಮಾದರಿಗಳನ್ನೂ ಪರೀಕ್ಷೆ ನಡೆಸಲಾಗಿದ್ದು, ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT