ಢಾಕಾ: ಬಾಂಗ್ಲಾದೇಶದ ಜಮಾತ್-ಎ-ಇಸ್ಲಾಮಿ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಈ ಮೂಲಕ ಭವಿಷ್ಯದ ಚುನಾವಣೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದೆ. ಮುಖ್ಯ ನ್ಯಾಯಮೂರ್ತಿ ಸೈಯದ್ ಅಹ್ಮದ್ ಅವರಿದ್ದ ಪೀಠ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಪಕ್ಷವು ತನ್ನ ‘ಸ್ಕೇಲ್‘ ಚಿಹ್ನೆಯನ್ನು ಬಳಸಿ ಚುನಾವಣೆಗಳಲ್ಲಿ ಸ್ಪರ್ಧಿಸಬಹುದೇ ಎಂಬ ವಿಚಾರ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು ಎಂದು ನ್ಯಾಯಾಲಯ ಹೇಳಿದೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಆಗಸ್ಟ್ 5, 2024ರಂದು ಜಮಾತ್-ಎ-ಇಸ್ಲಾಮಿ ಪಕ್ಷದ ಮೇಲೆ ಸಂಪೂರ್ಣ ನಿಷೇಧ ಹೇರಿತು. ನಂತರ ಬಂದ ಮಧ್ಯಂತರ ಸರ್ಕಾರವು ಅದರ ಮೇಲಿನ ನಿಷೇಧವನ್ನು ತೆಗೆದುಹಾಕಿದ ಸುಮಾರು ಎಂಟು ತಿಂಗಳ ಬಳಿಕ ಸುಪ್ರೀಂಕೋರ್ಟ್ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ.

2013ರಲ್ಲಿ ಸುಪ್ರೀಂಕೋರ್ಟ್ ಜಮಾತ್-ಎ-ಇಸ್ಲಾಮಿ ನೋಂದಣಿಯನ್ನು ರದ್ದುಗೊಳಿಸಿತು, ಪಕ್ಷವು ರಾಷ್ಟ್ರೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹವಾಗಿದೆ ಎಂದು ತೀರ್ಪು ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.