ವಾಜಿಮಾ, ಜಪಾನ್: ಹೊಸ ವರ್ಷದ ಮೊದಲ ದಿನ (ಸೋಮವಾರ) ಜಪಾನ್‌ನ ಪಶ್ಚಿಮ ಭಾಗದ ಕರಾವಳಿಯಲ್ಲಿ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಭೂಕಂಪದ ತೀವ್ರತೆ ಒಂದು ಬಾರಿ ರಿಕ್ಟರ್ ಮಾಪನದಲ್ಲಿ 7.6ರಷ್ಟು ದಾಖಲಾಗಿದೆ. ಅವಘಡದಲ್ಲಿ ಭಾರಿ ಪ್ರಮಾಣದಲ್ಲಿ ಆಸ್ತಿ ನಷ್ಟವಾಗಿದೆ. ಕುಸಿದ ಕಟ್ಟಡಗಳಡಿ ಸಿಲುಕಿರುವವರ ರಕ್ಷಣೆಗೆ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದ್ವೀಪ ಪ್ರದೇಶ ಹೊನ್ಶುವಿನ ಇಶಿಕಾವಾ ವಲಯದಲ್ಲಿ ಭೂಕಂಪದ ತೀವ್ರತೆಯು ಹೆಚ್ಚಾಗಿದೆ. ಬಹುಮಹಡಿ ಕಟ್ಟಡ ಸೇರಿದಂತೆ ಹಲವು ಮನೆಗಳು ಉರುಳಿವೆ. ಹೆಚ್ಚಿನ ರಸ್ತೆಗಳು ಬಿರುಕುಬಿಟ್ಟಿವೆ. ಅಲ್ಲಲ್ಲಿ ಬೆಂಕಿ ಅವಘಡಗಳು ವರದಿಯಾಗಿದ್ದವು.

ಇದುವರೆಗೆ 100 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಆದರೆ, ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಶೋಧ ಕಾರ್ಯ ಚುರುಕಿನಿಂದ ಸಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.
.Video | ಜಪಾನ್: ಬೆಂಕಿ ಹೊತ್ತಿಕೊಂಡ ವಿಮಾನದಿಂದ ಪ್ರಯಾಣಿಕರು ಪಾರಾಗಿದ್ದು ಹೇಗೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.