ಟೋಕಿಯೊ: ಜಪಾನ್ನ ಇತಿಹಾಸದಲ್ಲಿ ಮೊದಲ ಬಾರಿ ಮಹಿಳೆಯೊಬ್ಬರು ಪ್ರಧಾನಿ ಹುದ್ದೆ ಅಲಂಕರಿಸುವುದು ಬಹುತೇಕ ಖಚಿತವಾಗಿದೆ.

ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ(ಎಲ್ಡಿಪಿ) ಕಟ್ಟಾ ಸಂಪ್ರದಾಯವಾದಿಯಾಗಿರುವ ಸನೆ ತಾಕೈಚಿ ಅವರನ್ನು ಹೊಸ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಆದರೆ, ಸನೆ ತಾಕೈಚಿ ಅವರನ್ನು ಸ್ತ್ರೀವಾದ ಪ್ರತಿಪಾದಿಸುವ ದೃಷ್ಟಿಯಿಂದ ಆಯ್ಕೆ ಮಾಡಿಲ್ಲ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಡೆದ ಚುನಾವಣೆಯಲ್ಲಿ 54 ವರ್ಷದ ಸನೆ ತಾಕೈಚಿ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶದ ರಕ್ಷಣೆ ಹಾಗೂ ಆರ್ಥಿಕತೆ ವಿಚಾರದಲ್ಲಿ ಕೇಂದ್ರಿಕರಿಸಿ, ಕಠಿಣ ನಿಲುವಿನ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಪಕ್ಷದ ಆಂತರಿಕ ಚುನಾವಣೆಯಲ್ಲಿ ದೇಶದ ಜನಪ್ರಿಯ ಮಾಜಿ ಪ್ರಧಾನಿ ಜುನಿಚಿರೊ ಕೊಯ್ಚುಮಿ ಅವರ ಪುತ್ರ ಹಾಗೂ ಕೃಷಿ ಸಚಿವ 44 ವರ್ಷದ ಶಿಂಜಿರೊ ಕೊಯ್ಚುಮಿ ಅವರನ್ನು ಸನೆ ತಾಕೈಚಿ ಮಣಿಸಿದರು. ಸಂಸತ್ತಿನಲ್ಲಿ ಅವರಿಗೆ ಅನುಮೋದನೆ ಸಿಕ್ಕ ಬಳಿಕ ಸನೆ ತಾಕೈಚಿ ಅವರು ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರಕ್ಕೇರುವುದು ಖಚಿತವಾಗಿದೆ.

ನಾಯಕಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ, ದೇಶದಲ್ಲಿ ‘ಹೊಸ ಯುಗ’ ಆರಂಭಗೊಂಡಿದೆ ಎಂದು ಶ್ಲಾಘಿಸಿದರು.

ಮಾರ್ಗರೆಟ್ ಥ್ಯಾಚರ್ ಅವರನ್ನು ತನ್ನ ನಾಯಕಿ ಎಂದು ಪರಿಗಣಿಸಿರುವ ತಾಕೈಚಿ, ಎಲ್ಡಿಪಿ ಪಕ್ಷದ ಗತವೈಭವವನ್ನು ಮರುಸ್ಥಾಪಿಸಲು ಬೆಟ್ಟದಷ್ಟು ಕೆಲಸಗಳು ಬಾಕಿ ಉಳಿದಿವೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.