ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ ಬಾಹ್ಯಾಕಾಶ ಸಂಸ್ಥೆಯ ರಾಕೆಟ್ ಎಂಜಿನ್ ಟೆಸ್ಟಿಂಗ್ ವೇಳೆ ಸ್ಫೋಟ

Published 14 ಜುಲೈ 2023, 10:13 IST
Last Updated 14 ಜುಲೈ 2023, 10:13 IST
ಅಕ್ಷರ ಗಾತ್ರ

ಟೋಕಿಯೊ: ಜಪಾನ್ ಬಾಹ್ಯಾಕಾಶ ಸಂಸ್ಥೆಯ ರಾಕೆಟ್ ಎಂಜಿನ್ ಟೆಸ್ಟಿಂಗ್ ವೇಳೆ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಜಪಾನ್‌ನ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಮಾಹಿತಿ ನೀಡಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.

ಉತ್ತರ ಜಪಾನ್‌ಲ್ಲಿರುವ ಜಪಾನ್ ಏರೋಸ್ಪೇಸ್ ಎಕ್ಸ್ ಪ್ಲೋರೇಷನ್ ಏಜೆನ್ಸಿ (ಜೆಎಎಕ್ಸ್ಎ) ಟೆಸ್ಟಿಂಗ್ ಕೇಂದ್ರದಲ್ಲಿ ಎಪ್ಸಿಲಾನ್ ಎಸ್ ಎಂಬ ಎಂಜಿನ್ ಸ್ಪೋಟಗೊಂಡಿದೆ.

ಇದರೊಂದಿಗೆ ಜಪಾನ್ ಬಾಹ್ಯಾಕಾಶ ಮಹತ್ವಾಕಾಂಕ್ಷೆಯ ಯೋಜನೆಗೆ ಸತತ ಹಿನ್ನಡೆಯಾಗಿದೆ. ಮಾರ್ಚ್ ಹಾಗೂ ಕಳೆದ ತಿಂಗಳಲ್ಲೂ ವೈಫಲ್ಯ ಅನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT