ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಜೀಪ್‌: 14 ಮಂದಿ ಸಾವು

Published 10 ಜುಲೈ 2024, 14:26 IST
Last Updated 10 ಜುಲೈ 2024, 14:26 IST
ಅಕ್ಷರ ಗಾತ್ರ

ಮುಜಾಫ್ಫರಾಬಾದ್: ಪಾಕ್‌ ಆಕ್ರಮಿತ ಕಾಶ್ಮೀರದ ಗುಡ್ಡಗಾಡು ರಸ್ತೆಯಿಂದ ಜೀಪ್‌ ಉರುಳಿ ಕಂದಕಕ್ಕೆ ಬಿದ್ದಿದ್ದು, ದುರಂತದಲ್ಲಿ 14 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ನೀಲಂ ಕಣಿವೆಯಲ್ಲಿ ಬುಧವಾರ ಘಟನೆ ನಡೆದಿದೆ ಎಂದು ಸರ್ಕಾರಿ ಅಧಿಕಾರಿ ನದೀಮ್ ಜಂಜುವಾ ಹೇಳಿದರು.

‘ರಕ್ಷಣಾ ಪಡೆಯು ಮೃತದೇಹಗಳನ್ನು ಹೊರತಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ಏನೆಂದು ಇನ್ನಷ್ಟೆ ಪತ್ತೆ ಮಾಡಬೇಕಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT