ವಾಷಿಂಗ್ಟನ್: ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಖಂಡಿಸಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವುದು ‘ಪ್ರಚೋದಿತ’ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಾಗಿದೆ‘ ಎಂದು ಪುಟಿನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ರಷ್ಯಾದ ವಿರುದ್ಧ ಅಮೆರಿಕ ಮತ್ತಷ್ಟು ನಿರ್ಬಂಧಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಓದಿ... ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್

‘ವ್ಲಾಡಿಮಿರ್ ಪುಟಿನ್ ಅವರು ಪೂರ್ವಯೋಜಿತ ಯುದ್ಧವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ದಾಳಿಯಿಂದಅಪಾರ ಪ್ರಮಾಣದ ಸಾವು– ನೋವು ಸಂಭವಿಸುವ ಸಾಧ್ಯತೆ ಇದೆ. ಈ ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಲಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯೆ ನೀಡಲಿವೆ. ಇಡೀ ಪ್ರಪಂಚ ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ’ ಎಂದು ಬೈಡನ್ ಎಚ್ಚರಿಕೆ ನೀಡಿದ್ದಾರೆ.

ಓದಿ...ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧ ಘೋಷಿಸಿದ ಅಮೆರಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.