ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ ನೂತನ ಅಧ್ಯಕ್ಷರಾಗಿ ವಿಡೊಡೊ ಪುನರಾಯ್ಕೆ

Last Updated 21 ಮೇ 2019, 17:36 IST
ಅಕ್ಷರ ಗಾತ್ರ

ಜಕಾರ್ತ: ವಿಶ್ವದ ಮೂರನೇ ದೊಡ್ಡ ಪ್ರಜಾಪ್ರಭುತ್ವ ಎನಿಸಿರುವ ಇಂಡೊನೇಷ್ಯಾದ ನೂತನ ಅಧ್ಯಕ್ಷರಾಗಿ ಜೋಕೊ ವಿಡೊಡೊ ಪುನರಾಯ್ಕೆಯಾಗಿದ್ದಾರೆ.

ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಮಂಗಳವಾರ ಬಹಿರಂಗಗೊಂಡಿದೆ. ಆದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಮತ ಗಳಿಕೆ ಪ್ರಮಾಣವನ್ನು ಚುನಾವಣಾ ಆಯೋಗವು ಬುಧವಾರ ಅಧಿಕೃತವಾಗಿ ಪ್ರಕಟಿಸಲಿದೆ.

ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ವಂಚನೆ ನಡೆದಿದೆ ಎಂದು ವಿಡೊಡೊ ಪ್ರತಿಸ್ಪರ್ಧಿ ಪ್ರಬೊವೊ ಸುಬಿಯಾಂತೊ ಆರೋಪಿಸಿದ್ದು, ಇದರ ವಿರುದ್ಧ ಜನರು ದಂಗೆ ಏಳುವರು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಜಕಾರ್ತದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾವಿರಾರು ಜನ ಯೋಧರನ್ನು ನಿಯೋಜನೆ ಮಾಡಲಾಗಿದೆ.

ಚುನಾವಣಾ ಅಕ್ರಮಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂದು ಸುಬಿಯಾಂತೊ ಅವರು ಆಯೋಗದ ವಿರುದ್ಧ ಕಿಡಿ ಕಾರಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಾಂಬ್‌ ದಾಳಿ ನಡೆಸಲು ಇಸ್ಲಾಮಿಕ್‌ ಸ್ಟೇಟ್‌ ಜೊತೆ ಸಂಪರ್ಕ ಹೊಂದಿರುವ
ಉಗ್ರರು ಸಂಚು ನಡೆಸಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರು. ಇದೇ ಸಂಬಂಧ, ಇಸ್ಲಾಮಿಕ್‌ ಸ್ಟೇಟ್‌
ನೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಮೇಲೆ ಕೆಲವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT