ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆಯ ಮೂಲಕ ಕಾಶ್ಮೀರ ಹಾಗೂ ಇತರ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಚೀನಾ ಶುಕ್ರವಾರ ಹೇಳಿದೆ.

ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆಗೆ ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯಗಳು ರಚನಾತ್ಮಕ ಪಾತ್ರ ವಹಿಸುತ್ತಿವೆ. ಇವುಗಳಿಗೆ ನಮ್ಮ ಬೆಂಬಲವಿದೆ ಎಂದಿದೆ.

ಕಾಶ್ಮೀರ ವಿವಾದ ಪರಿಹಾರಕ್ಕೆ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜೊತೆ ಶ್ವೇತಭವನದಲ್ಲಿ ನಡೆದ ಮಾತುಕತೆಯ ವೇಳೆ ಹೇಳಿದ್ದರು. ಅನಂತರ ಚೀನಾ ಈ ಪ್ರತಿಕ್ರಿಯೆ ನೀಡಿದೆ.

’ಉಭಯ ದೇಶಗಳು ಪರಸ್ಪರ ಸಾಮರಸ್ಯ ಕಾಪಾಡಿಕೊಳ್ಳುವ ಭರವಸೆ ಇದೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್ ಹೇಳಿದ್ದಾರೆ.

ಜಪಾನ್‌ನ ಒಸಾಕದಲ್ಲಿ ನಡೆದ ಜಿ–20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ನನ್ನಲ್ಲಿ ಕೋರಿದ್ದರು ಎಂದು ಟ್ರಂಪ್ ಈಚೆಗೆ ಹೇಳಿದ್ದರು. ಈ ಹೇಳಿಕೆಯನ್ನು ಭಾರತವು ಅಲ್ಲಗಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.