ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದೇನೆ: ಬ್ರಿಟನ್‌ ರಾಜಕುಮಾರಿ

Published 23 ಮಾರ್ಚ್ 2024, 13:52 IST
Last Updated 23 ಮಾರ್ಚ್ 2024, 13:52 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ನಿನ ರಾಜಕುಮಾರಿ ಕೇಟ್‌ ಮಿಡ್ಲಟನ್‌ ಅವರು, ‘ತಾನು ಕ್ಯಾನ್ಸರ್‌ಗೆ ತುತ್ತಾಗಿದ್ದು, ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಶುಕ್ರವಾರ ತಿಳಿಸಿದ್ದಾರೆ. ಈ ಮೂಲಕ, ತಮ್ಮ ಆರೋಗ್ಯದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಅವರ ಸಂದೇಶವುಳ್ಳ ವಿಡಿಯೊವೊಂದನ್ನು ಕೆನ್ಸಿಂಗ್ಟನ್‌ ಅರಮನೆ ಬಿಡುಗಡೆ ಮಾಡಿದ್ದು, ‘ಕಾನ್ಸರ್‌ ಇಲ್ಲವೆಂದು ಭಾವಿಸಿ ಜನವರಿ ಆರಂಭದಲ್ಲಿ ನಾನು ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಾಗಾಗಿದ್ದೆ. ಆದರೆ ಶಸ್ತ್ರಚಿಕಿತ್ಸೆಯ ಬಳಿಕ ನಡೆಸಿದ ಪರೀಕ್ಷೆಯಲ್ಲಿ ಕ್ಯಾನ್ಸರ್‌ ಇರುವುದು ಕಂಡುಬಂದಿದೆ’ ಎಂದು ಹೇಳಿದ್ದಾರೆ.

‘ನನ್ನ ವೈದ್ಯಕೀಯ ತಂಡದ ಸಲಹೆಯಂತೆ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗಿದ್ದೇನೆ. ಮೊದಲ ಹಂತದ ಚಿಕಿತ್ಸೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT