ಜನವರಿ 2ರಂದು ಈ ಪ್ರತಿಭಟನೆಗಳು ಆರಂಭವಾಗಿದ್ದವು. ಮೃತರಲ್ಲಿ 19 ಮಂದಿ ಪೊಲೀಸ್ ಅಥವಾ ಸರ್ಕಾರಿ ಅಧಿಕಾರಿಗಳೂ ಸೇರಿದ್ದಾರೆ. 4,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಕ್ರಿಮಿನಲ್ ಪ್ರಾಸಿಕ್ಯೂಷನ್ ಸರ್ವಿಸ್‌ನ ಮುಖ್ಯಸ್ಥ ಸೆರೆಕ್ ಶಲಬಯೆವ್ ಅವರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.