ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ರಾಜ 3ನೇ ಚಾರ್ಲ್ಸ್‌ಗೆ ಕ್ಯಾನ್ಸರ್ ದೃಢ

Published 6 ಫೆಬ್ರುವರಿ 2024, 2:15 IST
Last Updated 6 ಫೆಬ್ರುವರಿ 2024, 2:15 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ ಹ್ಯಾಮ್ ಅರಮನೆ ತಿಳಿಸಿದೆ.

ಚಾರ್ಲ್ಸ್‌ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕವಾಗಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಖಾಸಗಿ ಸಭೆ ಸೇರಿದಂತೆ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯ ತಿಳಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

'ಚಾರ್ಲ್ಸ್ ಅವರು ಪೂರ್ಣ ಶಕ್ತಿಯೊಂದಿಗೆ ಮರಳುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಇಡೀ ದೇಶ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸುತ್ತದೆ' ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT